ಪಾಲ್ವರ್, ಫೆ. 28: ತಾನೇ ಜನ್ಮ ನೀಡಿದ ಹೆಣ್ಣು ಮಕ್ಕಳ ಮೇಲೆ ಅತ್ಯಚಾರ ನಡೆಸಿ ಪತ್ನಿಗೆ ಚಿತ್ರಹಿಂಸೆ ನೀಡಿದ್ದ ಛೋಟಾ ರಾಜನ್ ಗ್ಯಾಂಗ್ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಪತ್ನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ 56 ವರ್ಷದ ವ್ಯಕ್ತಿಯನ್ನು ಪಾಲ್ಕರ್ ಜಿಲ್ಲೆಯ ಮೀರಾ-ಭಯಂದರ್ ವಸಾಯಿ-ವಿರಾರ್ ಪೊಲೀಸರು ಬಂಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
2018 ಮತ್ತು ಫೆಬ್ರವರಿ 2025 ರ ನಡುವೆ ಆರೋಪಿ ತನ್ನ ಇಬ್ಬರು ಹಿರಿಯ ಹೆಣ್ಣುಮಕ್ಕಳ ಮೇಲೆ ಹಲವಾರು ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಅವರಲ್ಲಿ ಒಬ್ಬಳನ್ನು ಗರ್ಭಪಾತಕ್ಕೆ ಒಳಗಾಗುವಂತೆ ಒತ್ತಾಯಿಸಿದ್ದಾನೆ ಎಂದು ಹಿರಿಯ ಇನ್ಸೆಕ್ಟರ್ ಅವಿರಾಜ್ ಕುರ್ಹಾಡೆ ತಿಳಿಸಿದ್ದಾರೆ.
16 ಮತ್ತು 12 ವರ್ಷದ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸ್ ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ಹೆಸರಿನಲ್ಲಿ ಪಾಲ್ವರ್, ಕರ್ಜತ್, ಕಂಕವಿ ಮತ್ತು ಸಿಯಾನ್ ಪೊಲೀಸ್ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದರು.