Saturday, March 1, 2025
Homeಬೆಂಗಳೂರುಬೆಂಗಳೂರಲ್ಲಿ ಗಾಂಜಾ ಮಾರುತ್ತಿದ್ದ 7 ಮಂದಿ ಸೆರೆ

ಬೆಂಗಳೂರಲ್ಲಿ ಗಾಂಜಾ ಮಾರುತ್ತಿದ್ದ 7 ಮಂದಿ ಸೆರೆ

7 people arrested for selling ganja in Bengaluru

ಬೆಂಗಳೂರು, ಫೆ.28– ನಗರದಲ್ಲಿ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ನಗರ ಪೊಲೀಸರು ಬಂಧಿಸಿ 11.22 ಲಕ್ಷ ರೂ. ಮೌಲ್ಯದ 50 ಕೆಜಿ ಗಾಂಜಾ, 3 ದ್ವಿಚಕ್ರವಾಹನ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಉಪ್ಪಾರಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7 ಲಕ್ಷ ಮೌಲ್ಯದ 14 ಕೆಜಿ ಗಾಂಜಾ ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಇನ್‌ಸ್ಪೆಕ್ಟರ್ ಮಾರುತಿ ಅವರನ್ನೊಳಗೊಂಡ ತಂಡ ಯಶಸ್ವಿಯಾಗಿದೆ.

ಮಹದೇವಪುರ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ 2 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಮೊಬೈಲ್ ವಶಪಡಿಸಿಕೊಳ್ಳುವಲ್ಲಿ ಇನ್‌ಸ್ಪೆಕ್ಟರ್‌ ಪ್ರವೀಣ್ ಬಾಬು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕಲಾಸಿಪಾಳ್ಯ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ 1.62 ಲಕ್ಷ ರೂ. ಮೌಲ್ಯದ 9 ಗ್ರಾಂ ಎಂಡಿಎಂಎ, 1 ಕೆಜಿ ಗಾಂಜಾ, 1 ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳುವಲ್ಲಿ ಇನ್‌ಸ್ಪೆಕ್ಟರ್ ಕಿರಣ್‌ಕುಮಾ‌ರ್ ಯಶಸ್ವಿಯಾಗಿದ್ದಾರೆ.

ಕಾಟನ್‌ಪೇಟೆ ಠಾಣೆ ಇನ್‌ಸ್ಪೆಕ್ಟರ್ ಎರಿಸ್ವಾಮಿ ಮತ್ತು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 60 ಸಾವಿರ ಮೌಲ್ಯದ 30 ಗ್ರಾಂ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ.

RELATED ARTICLES

Latest News