Saturday, March 1, 2025
Homeರಾಷ್ಟ್ರೀಯ | Nationalಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

4 dead, 19 injured as bus crashes into truck on Agra-Lucknow expressway

ಆಗ್ರಾ, ಮಾ. 1: ವಾರಣಾಸಿ-ಜೈಪುರ ಬಸ್ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು, 19 ಮಂದಿ ಗಾಯಗೊಂಡಿರುವ ಘಟನೆ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗ್ರಾದ ಫತೇಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 5.30 ರ ಸುಮಾರಿಗೆ ಬಸ್ ಹಿಂದಿನಿಂದ ಟ್ರಕ್‌ ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಫತೇಹಾಬಾದ್ ಎಸಿಪಿ ಅಮರ್ದೀಪ್ ಲಾಲ್ ತಿಳಿಸಿದ್ದಾರೆ. ಮೃತರಲ್ಲಿ ಒಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮೃತರನ್ನು ರಾಜಸ್ಥಾನ ಮೂಲದ ಗೋವಿಂದ್ (68), ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಗುರುತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

Latest News