Tuesday, March 11, 2025
Homeರಾಷ್ಟ್ರೀಯ | Nationalಭಾರತ್ ಜೋಡೊ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕೈ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

ಭಾರತ್ ಜೋಡೊ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕೈ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ

Woman congress activist’s body found in suitcase, was active in Bharat Jodo Yatra

ಚಂಡೀಗಢ,ಮಾ.2- ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ (22) ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್‌ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ.

ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಆಕೆಯ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರೋಹಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದೆ.

ಹಿಮಾನಿ ನರ್ವಾಲ್ ಅವರು ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಪುತ್ರ ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಪಕ್ಷದ ಶಾಸಕ ಬಿಬಿ ಬಾತ್ರಾ ಅವರೊಂದಿಗೆ ಕಾಣಿಸಿಕೊಂಡಿದ್ದರು. ಅವರೊಂದಿಗಿನ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಸದ್ಯ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು, ಎಸ್‌ಐಟಿ ತನಿಖೆಗೆ ಆಗ್ರಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News