Wednesday, March 12, 2025
Homeಕ್ರೀಡಾ ಸುದ್ದಿ | SportsVirat Kohli : ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಿದ ಕೊಹ್ಲಿ

Virat Kohli : ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಿದ ಕೊಹ್ಲಿ

Virat Kohli Surpasses Rahul Dravid in List of Most Catches

ದುಬೈ.ಮಾ.3– ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವಲ್ಲಿ ವಿರಾಟ್ ಕೊಹ್ಲಿ (Virat Kohli) ಯಶಸ್ವಿಯಾಗಿದ್ದಾರೆ. ಇದರೊಂದಿಗೆ 56 ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದಂತಾಗಿದೆ.

ಆದರೆ ಈ ಬಾರಿ ದಾಖಲೆ ನಿರ್ಮಿಸಿದ್ದು ಬ್ಯಾಟ್‌ನಿಂದಲ್ಲ. ಬದಲಾಗಿ ಅದ್ಭುತ ಫೀಲ್ಡಿಂಗ್ ಮೂಲಕ ಎಂಬುದು ವಿಶೇಷ ದುಬೈನ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 249 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಟ್ ಹೆನ್ರಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಈ ಕ್ಯಾಚ್‌ನೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಭಾರತದ ಪರ 504 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಒಟ್ಟು 333 ಕ್ಯಾಚ್‌ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಅಳಿಸಿ ಹಾಕಿದ್ದಾರೆ.

ಇದೀಗ ಟೀಮ್ ಇಂಡಿಯಾ ಪರ 548 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಈವರೆಗೆ 334 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಹಾಗೂ ವಿಶ್ವದ 5ನೇ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿದ್ದಾರೆ.
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮಹೇಲ ಜಯವರ್ಧನೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ 652 ಪಂದ್ಯಗಳನ್ನಾಡಿರುವ ಜಯವರ್ಧನೆ ಒಟ್ಟು 440 ಕ್ಯಾಚ್ ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ. ಈ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

RELATED ARTICLES

Latest News