Thursday, March 6, 2025
Homeರಾಜ್ಯಕೈಗಾರಿಕೆ ಸ್ಥಾಪನೆ ಸಿದ್ದತೆ ನಿಲ್ಲಿಸಲು ಸಿದ್ದರಾಮಯ್ಯ ಕೊಪ್ಪಳ ಡಿಸಿ-ಎಸ್ಪಿಗೆ ಸೂಚನೆ

ಕೈಗಾರಿಕೆ ಸ್ಥಾಪನೆ ಸಿದ್ದತೆ ನಿಲ್ಲಿಸಲು ಸಿದ್ದರಾಮಯ್ಯ ಕೊಪ್ಪಳ ಡಿಸಿ-ಎಸ್ಪಿಗೆ ಸೂಚನೆ

ಕೊಪ್ಪಳ: ಕೊಪ್ಪಳ ಸಮೀಪದಲ್ಲಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪನಿಯ ಉಕ್ಕು ಕಾರ್ಖಾನೆ ಸ್ಥಾಪನೆಯ ಎಲ್ಲ ಸಿದ್ಧತೆಗಳನ್ನು ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಡಿಸಿ ಅವರಿಗೆ ಸೂಚನೆ ನೀಡಿದ್ದಾರೆ. ನಗರದ ಸಮೀಪದಲ್ಲಿ ಬಿಎಸ್‌ಪಿಎಲ್ ಕೈಗಾರಿಕಾ ಸ್ಥಾಪನೆ ಮಾಡದಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಹಾಲಿ ಹಾಗೂ ಮಾಜಿ ಶಾಸಕರು ಸಚಿವರನ್ನು ಒಳಗೊಂಡಂತೆ ಸರ್ವ ಪಕ್ಷಗಳ ನಿಯೋಗವು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿ ಬಲ್ಲೊಟ್ಟ ಕಂಪನಿಯ ಹೊಸ ಕೈಗಾರಿಕೆ ಸ್ಥಾಪನೆಯ ಸಿದ್ಧತೆಯನ್ನು ತಕ್ಷಣ ನಿಲ್ಲಿಸುವಂತೆ ಸ್ಥಳದಲ್ಲಿಯೇ ನಿರ್ದೇಶನ ನೀಡಿದ್ದಾರೆ.

ಸಿದ್ಧತೆ ಬಂದು ಮಾಡಿದ ವರದಿಯನ್ನು ತಮಗೆ ಸಲ್ಲಿಸುವಂತೆ ಸರ್ಕಾರದ ಮುಖ್ಯ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೆ ಸರ್ಕಾರದ ವತಿಯಿಂದ ಕೈಗಾರಿಕೆ ಸ್ಥಾಪನೆಯ ತಡೆಯುವ ಕುರಿತಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿಯೂ ಸರ್ವ ಪಕ್ಷಗಳ ನಿಯೋಗಕ್ಕೆ ಸಿಎಂ ಭರವಸೆ ನೀಡಿರುವುದು ತಿಳಿದು ಬಂದಿದೆ.

ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಮುನ್ನ ಶಿವರಾಜ ತಂಗಡಗಿಯವರ ಗೃಹ ಕಚೇರಿಯಲ್ಲಿ ಇಂದು ಜಿಲ್ಲೆಯ ಸರ್ವಪಕ್ಷಗಳ ಚುನಾಹಿತ ಪ್ರತಿನಿಧಿಗಳ, ರಾಜಕೀಯ ಮುಖಂಡರು ಸಭೆ ನಡೆಸಿದ್ದು, ಬಳಿಕ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಬಿ.ಎಸ್.ಪಿ.ಎಲ್. ಉಕ್ಕು ಕಾರ್ಖಾನೆ ಸ್ಥಾಪನೆಯಿಂದ ಜನರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಹಿತಿ ನೀಡಿದರು. ಎಲ್ಲರೂ ಕೂಡಾ ಉಕ್ಕು ಕಾರ್ಖಾನೆ ಸ್ಥಾಪನೆ ಮಾಡದಂತೆ ಸರ್ವಪಕ್ಷಗಳ ನಿಯೋಗದಲ್ಲಿನ ಎಲ್ಲರೂ ಮನವೊಲಿಸುವ ಪ್ರಯತ್ನ ಮಾಡಿದರು. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಗೂ ಸರ್ವಪಕ್ಷಗಳ ನಿಯೋಗದಿಂದ ಉಕ್ಕು ಕಾರ್ಖಾನೆ ಸ್ಥಾಪಿಸದಂತೆ ಮನವಿ ಸಲ್ಲಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ವಿಧಾನಸಭೆಯ ವಿಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಗಾಲಿ ಜನಾರ್ಧನರೆಡ್ಡಿ, ಎಂಎಲ್ಸಿಗಳಾದ ಹೇಮಲತಾ ನಾಯಕ, ಬಸನಗೌಡ ಬಾದರ್ಲಿ, ಶರಣೇಗೌಡ ಪಾಟೀಲ್ ಬಯ್ಯಾಪುರ, ಸಂಸದ ಕೆ.ರಾಜಶೇಖರ ಹಿಟ್ನಾಳ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಜೆಡಿಎಸ್ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಡಾ.ಬಸವರಾಜ ಕ್ಯಾವಟರ್, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಕೆ.ಶರಣಪ್ಪ, ಕರಿಯಣ್ಣ ಸಂಗಟಿ ಅನೇಕರು ಉಪಸ್ಥಿತರಿದ್ದರು.

RELATED ARTICLES

Latest News