Thursday, March 6, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviಬೆಳಗಾವಿ : ಕುಟುಂಬ ಕಲಹದಿಂದ ಮನನೊಂದು ಕೃಷ್ಣಾ ನದಿಗೆ ಹಾರಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಳಗಾವಿ : ಕುಟುಂಬ ಕಲಹದಿಂದ ಮನನೊಂದು ಕೃಷ್ಣಾ ನದಿಗೆ ಹಾರಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Mother commits suicide by jumping into Krishna river with three children due to family dispute

ಬೆಳಗಾವಿ,ಮಾ.5- ಕೌಟುಂಬಿಕ ಕಲಹದಿಂದ ಮನನೊಂದು ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತಹತ್ಯೆ ಮಾಡಿಕೊಂಡಿರುವ ಘಟನೆ ಮುಳವಾಡ ಬಳಿ ನಡೆದಿದೆ.ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದ ಶಾರದ ಢಾಲೆ(38), ಮಕ್ಕಳಾದ ಅನುಷಾ(10), ಅಮೃತಾ(14) ಮತ್ತು ಆದರ್ಶ (8) ಮೃತಪಟ್ಟವರು.

ಪತಿ ಅಶೋಕ ಕೂಲಿ ಕೆಲಸ ಮಾಡುತ್ತಿದ್ದು, ಕುಡಿತದ ಚಟ ಹೊಂದಿದ್ದನು. ಈತನ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದಿದ್ದ ಶಾರದಾ ಅವರು ತನ್ನ ಮೂವರು ಮಕ್ಕಳನ್ನು ಮನೆಯಿಂದ ಕರೆದುಕೊಂಡು ರಾತ್ರಿ ಮುಳವಾಡದ ಕೃಷ್ಣಾನದಿ ಬಳಿ ತೆರಳಿ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತಹತ್ಯೆಗೆ ಶರಣಾಗಿದ್ದಾರೆ. ಇದು ಯಾರ ಗಮನಕ್ಕೂ ಬಂದಿಲ್ಲ.

ಇಂದು ಬೆಳಗಿನ ಜಾವ 4ಗಂಟೆ ಸುಮಾರಿನಲ್ಲಿ ಈ ಸುದ್ದಿ ತಿಳಿಯುತ್ತಿದಂತೆ ಕುಡಚಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಮೃತದೇಹಗಳಿಗಾಗಿ ಶೋಧ ನಡೆಸಿ ನಾಲ್ವರ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಪತಿಯ ಕಿರುಕುಳದಿಂದ ಬೇಸತ್ತು ಮಕ್ಕಳೊಂದಿಗೆ ಶಾರದಾ ಅವರು ಆತಹತ್ಯೆ ಮಾಡಿಕೊಂಡಿರಬಹುದೆಂಬ ಶಂಕಿಸಲಾಗಿದೆ.ಈ ಬಗ್ಗೆ ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾರದಾ ಅವರ ಪತಿ ಅಶೋಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News