Thursday, March 6, 2025
Homeರಾಜ್ಯಹಕ್ಕಿಜ್ವರ ಮನುಷ್ಯರಿಗೆ ಹರಡುವುದು ಅಪರೂಪ, ಆತಂಕ ಬೇಡ : ಗುಂಡೂರಾವ್

ಹಕ್ಕಿಜ್ವರ ಮನುಷ್ಯರಿಗೆ ಹರಡುವುದು ಅಪರೂಪ, ಆತಂಕ ಬೇಡ : ಗುಂಡೂರಾವ್

Bird flu is rare for humans, no need to worry: Gundurao

ಬೆಂಗಳೂರು,ಮಾ.5- ಹಕ್ಕಿಜ್ವರದ ರೋಗ ಮನುಷ್ಯರಿಗೆ ಹರಡುವುದು ಅಪರೂಪವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯವಾಗಿ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಹಕ್ಕಿಜ್ವರದ ಪ್ರಕರಣಗಳು ರಾಜ್ಯದಲ್ಲಿ ಅಲ್ಲಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಎಚ್ಚರಿಕೆಗಳನ್ನು ವಹಿಸಬೇಕು ಎಂದು ಹೇಳಿದ್ದಾರೆ.

ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಜನ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಟಾಂಶದಲ್ಲಿ ಬೇಯಿಸಿ ಸೇವಿಸಬೇಕು. ಸೋಂಕುಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕೆಂಬ ಸಲಹೆಯನ್ನು ಅವರು ಮಾಡಿದ್ದಾರೆ.

RELATED ARTICLES

Latest News