Thursday, March 6, 2025
Homeಅಂತಾರಾಷ್ಟ್ರೀಯ | Internationalಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ, ಕನಿಷ್ಠ ಐದು ಮಂದಿ ಸಾವು

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ, ಕನಿಷ್ಠ ಐದು ಮಂದಿ ಸಾವು

Five Killed In Explosion In Market In Pakistan's Balochistan

ಬಲೂಚಿಸ್ತಾನ, ಮಾ. 6: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾರುಕಟ್ಟೆಯಲ್ಲಿ ಉಗ್ರರು ಸ್ಫೋಟಿಸಿದ ಐಇಡಿ ಸ್ಫೋಟದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಖುಜ್ಜಾರ್‌ನ ನಾಲ್ ಬಜಾರ್‌ನಲ್ಲಿ ನಿಲ್ಲಿಸಿದ್ದ ಮೋಟಾರ್‌ಬೈಕ್‌ನಲ್ಲಿ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಇರಿಸಲಾಗಿತ್ತು ಎನ್ನಲಾಗಿದೆ. ಸ್ಫೋಟದ ರಭಸಕ್ಕೆ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ವಾಹನಗಳು ನಾಶವಾಗಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಖುಜ್ಜಾರ್ ಜಾವೇದ್ ಜೆಹಿ ತಿಳಿಸಿದ್ದಾರೆ.

ಐಇಡಿ ಸ್ಫೋಟಕ್ಕೆ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಬಲೂಚಿಸ್ತಾನವು ಎರಡು ದಶಕಗಳಿಗೂ ಹೆಚ್ಚು ಕಾಲ ನಿರಂತರ ಹಿಂಸಾಚಾರ ಮತ್ತು ದಂಗೆಯನ್ನು ಎದುರಿಸುತ್ತಿದೆ.

ಜನವರಿ 26 ರಂದು, ಖುಜ್ಜಾರ್ ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ಬಳಿ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದರು ಮತ್ತು ಏಳು ಮಂದಿ ಗಾಯಗೊಂಡಿದ್ದರು.

RELATED ARTICLES

Latest News