Sunday, March 9, 2025
Homeರಾಜ್ಯಕೃಷಿ ಕ್ಷೇತ್ರಕ್ಕೆ ಹೈಟೆಕ್ ಟಚ್, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ

ಕೃಷಿ ಕ್ಷೇತ್ರಕ್ಕೆ ಹೈಟೆಕ್ ಟಚ್, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ

Hi-tech touch for agriculture sector, establishment of digital agriculture services center

ಬೆಂಗಳೂರು, ಮಾ.7- ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ದಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರಗಳಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಕೃಷಿಗೆ ಹೆಚ್ಚು ಒತ್ತು ನೀಡಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು. ಇದರಿಂದ ರೈತರಿಗೆ ಬೆಳೆಗಳ ಕುರಿತು ನಿಖರವಾದ ತೀರ್ಮಾನ ಕೈಗೊಂಡು ಬೆಳೆಗಳಲ್ಲಿ ಉತ್ಪಾದಕತೆ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದರು.

ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಸುಸ್ಥಿರ ಮತ್ತು ಲಾಭದಾಯಕವಾಗಿಸಲು ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ, ಪ್ರಾತ್ಯಕ್ಷಿಕೆಗಳ ಮೂಲಕ ರೈತರಿಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಕಲ್ಪಿಸಲಾಗುವುದು ಎಂದರು. ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥವಾಗಿ ಬಳಕೆ ಮಾಡಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಕೃಷಿ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ 1.81 ಲಕ್ಷ ರೈತರಿಗೆ ಹನಿ ಮದ್ದು, ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದರು.

ತೊಗರಿ ಬೆಳೆಗಳಲ್ಲಿ ನೂತನ ತಾಂತ್ರಿಕತೆ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆರು ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯುಬೇಷನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು.

RELATED ARTICLES

Latest News