ಬೆಂಗಳೂರು,ಮಾ.7– ದಾಖಲೆಯ 16ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2025-26ನೇ ಸಾಲಿನಲ್ಲಿ ಬಜೆಟ್ ಗಾತ್ರದ ಮೊತ್ತವನ್ನು 4 ಲಕ್ಷ ಕೋಟಿ 9,549.24 ರೂ.ಗೆ ಹೆಚ್ಚಿಸಿದ್ದಾರೆ.
ಕಳೆದ ಬಾರಿ ಅಂದರೆ 2024-25ನೇ ಸಾಲಿನಲ್ಲಿ 3.17,383 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡಿದ್ದರು. ಈ ಬಾರಿ ದಾಖಲೆಯ ಅಂದರೆ 4 ಲಕ್ಷ ಕೋಟಿ 9,549.24 ಮೊತ್ತದ ಬಜೆಟ್ ಮಂಡಿಸಿದ್ದಾರೆ. ಪ್ರತಿಬಾರಿಯೂ ಬಜೆಟ್ ಗಾತ್ರದ ಮೊತ್ತ ಹೆಚ್ಚುತ್ತಿರುವುದು ವಿಶೇಷವಾಗಿದೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು.
ನಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ ವಾಗ್ದಾನಗಳಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ. ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ ಎಂದು ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದರು.