Tuesday, March 11, 2025
Homeಬೆಂಗಳೂರುನಾಳೆ ನಮ್ಮ ಮೆಟ್ರೋ ಸೇವೆ ಸ್ಥಗಿತ

ನಾಳೆ ನಮ್ಮ ಮೆಟ್ರೋ ಸೇವೆ ಸ್ಥಗಿತ

Namma Metro Announces 3-Hour Service Shutdown

ಬೆಂಗಳೂರು,ಮಾ. – ನಮ್ಮ ಮೆಟ್ರೋ ಹಳಿ ನಿರ್ವಹಣೆಯ ಕಾಮಗಾರಿ ಇರುವ ಕಾರಣ ನಾಳೆ(ಭಾನುವಾರ) ಎರಡು ಪ್ರಮುಖ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ಪ್ರಕಟಣೆಯಲ್ಲಿ ತಿಳಿಸಿದೆ.

ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ ನಾಳೆ ನಮ್ಮ ಮೆಟ್ರೋ ಮೂರು ಗಂಟೆಗಳ ಕಾಲ ಸಂಪೂರ್ಣವಾಗಿ ಸ್ಥಗಿತವಾಗಿರಲಿದೆ ಎಂದು ಸೂಚನೆ ನೀಡಿದೆ. ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆಯಿಂದ ಎಂಜಿ ರಸ್ತೆಯವರೆಗಿನ ಸಂಚಾರ ಸೇವೆಯನ್ನು ಬಂದ್ ಮಾಡುವುದಾಗಿ ಮೆಟ್ರೋ ತಿಳಿಸಿದೆ.

ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸೌಲಭ್ಯ ಇರುವುದಿಲ್ಲ ಎಂದು ಬಿಎಮ್‌ಆರ್‌ಸಿಎಲ್ ಹೇಳಿದ್ದು, ತುರ್ತು ಹಳಿ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ.

ಕಬ್ಬನ್ ಪಾರ್ಕ್, ಡಾ.ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ. ಈ ಅವಧಿಯಲ್ಲಿ ಮೆಜೆಸ್ಟಿಕ್‌ನಿಂದ ಯಾವ ದಿಕ್ಕಿಗೂ ಮೆಟ್ರೋ ಸೇವೆ ಇರುವುದಿಲ್ಲ ಎಂದು ತಿಳಿದುಬಂದಿದೆ.

ಭಾನುವಾರ ಬಂದು ದಿನ ಬೆಳಗ್ಗೆ 7 ಗಂಟೆಯಿಂದ 10 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಹಾಗೂ ನೇರಳೆ ಮಾರ್ಗದಿಂದ ಹಸಿರು ಮಾರ್ಗದ ಯಾವ ಮೆಟ್ರೋ ರೈಲುಗಳೂ ಕಾರ್ಯಾಚರಿಸುವುದಿಲ್ಲ. ಹೀಗಾಗಿ ಮೆಜೆಸ್ಟಿಕ್‌ನಿಂದ ಈ ಮಾರ್ಗಗಳಿಗೆ ಕ್ಯೂ ಆರ್ ಟಿಕೆಟ್ ಖರೀದಿಸದಂತೆ ನಮ್ಮ ಮೆಟ್ರೋ ಮನವಿ ಮಾಡಿದೆ.

ಬೆಳಗ್ಗೆ 10 ಗಂಟೆವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ. ಮೆಜೆಸ್ಟಿಕ್‌ನಲ್ಲಿ ರೈಲು ಲಭ್ಯರುವುದಿಲ್ಲವಾದ್ದರಿಂದ ನೇರಳೆ ಮಾರ್ಗದಿಂದ ಹಸಿರು ಮಾರ್ಗಕ್ಕೆ ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್ ಟಿಕೆಟ್ ಮತ್ತು ಟೋಕನ್‌ಗಳನ್ನು ಖರೀದಿಸದಂತೆ ಸೂಚಿಸಲಾಗಿದೆ.

ನೇರಳೆ ಮಾರ್ಗದ ಇತರ ಭಾಗಗಳಲ್ಲಿ ಅಂದರೆ, ಚಲಘಟ್ಟ ಮತ್ತು ಮಾಗಡಿ ರಸ್ತೆ ನಡುವೆ ಹಾಗೂ ಎಂಜಿ ರಸ್ತೆ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ನಡುವೆ ರೈಲು ಸೇವೆಗಳು ಇಂದಿನಂತೆ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಮೇಲಿನ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತವೆ.

ಹಸಿರು ಮಾರ್ಗದಲ್ಲಿ ರೆಸ್ಟ್ ಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮತ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಲಿದೆ. ನಮ್ಮ ಮೆಟ್ರೋ ಪಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

RELATED ARTICLES

Latest News