Monday, March 10, 2025
Homeರಾಜ್ಯಹಂಪಿಯಲ್ಲಿ ಅತ್ಯಾಚಾರ ನಡೆಯಲು ಪೊಲೀಸ್ ಭದ್ರತೆ ಹಿಂಪಡೆದದ್ದೇ ಕಾರಣ : ಜನಾರ್ಧನರೆಡ್ಡಿ

ಹಂಪಿಯಲ್ಲಿ ಅತ್ಯಾಚಾರ ನಡೆಯಲು ಪೊಲೀಸ್ ಭದ್ರತೆ ಹಿಂಪಡೆದದ್ದೇ ಕಾರಣ : ಜನಾರ್ಧನರೆಡ್ಡಿ

Rape in Hampi is due to withdrawal of police security: Janardhan Reddy

ಬೆಂಗಳೂರು, ಮಾ.9– ಭಾರತದಲ್ಲಿ ಅತಿಹೆಚ್ಚು ವಿದೇಶಿ ಪ್ರವಾಸಿಗಳು ಬರುವ ಪ್ರವಾಸಿತಾಣ ಹಂಪಿಯಲ್ಲಿ ಹೋಮ್ ಸ್ಟೇ ಮಾಲಕಿಯ ಮೇಲೆ ಅತ್ಯಾಚಾರ ಘಟನೆ ವರದಿಯಾಗಿದೆ. ಇಲ್ಲಿನ ನಿಯೋಜಿಸಿದ್ದ ಪೊಲೀಸ್ ಭದ್ರತಾ ವ್ಯವಸ್ಥೆಯನ್ನು ಹಿಂಪಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಹಂಪಿಯಲ್ಲಿ ಕೂಡಲೇ ಪೊಲೀಸ್ ಸಬ್ ಡಿವಿಷನ್ ಆರಂಭಿಸಬೇಕು ಎಂದು ಶಾಸಕ ಗಾಲಿ ಜನಾರ್ಧನರೆಡ್ಡಿ ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರವಾಸಿಗರೊಬ್ಬರು ಹಾಗೂ ಹೋಮ್ ಸ್ಟೇ ಮಾಲಕಿಯ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದೆ. ಘಟನೆ ಕುರಿತು ವರದಿ ಪಡೆದು ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಅದರಂತೆ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದರು.

ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಅವರ ಸಹಕಾರದೊಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್‌ ಡಿವಿಷನ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಡಿವೈಎಸ್ಪಿ ಮಟ್ಟದ ಅಧಿಕಾರಿಯನ್ನು ನೇಮಿಸಿ 32 ಪೊಲೀಸ್ ತಂಡಗಳನ್ನು ರಚಿಸಿ ಅವರಿಗೆ ದ್ವಿಚಕ್ರ ವಾಹನವನ್ನು ನೀಡಲಾಗಿತ್ತು.

ಈ ಮೂಲಕ ಹಂಪಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಆನೆಗೊಂದಿ ಸಹ ಒಳಗೊಂಡಿರುವ ಕಾರಣ ಎರಡು ಐತಿಹಾಸಿಕ ಸ್ಥಳಗಳಿಗೆ ಆಗಮಿಸುವ ದೇಶ ವಿದೇಶಗಳ ಪ್ರವಾಸಿಗರ ರಕ್ಷಣೆಗೆ ಹಗಲಿರುಳು ಗಸ್ತು ತಿರುಗುವ ಉತ್ತಮ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇದೀಗ ದುರಾದೃಷ್ಟಕರ ಸಂಗತಿ ಎಂದರೆ ನಂತರ ಬಂದ ಸರ್ಕಾರ ಆ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅದನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಅತ್ಯಂತ ನಮ್ರವಾಗಿ ವಿನಂತಿಸುತ್ತಾ, ಹಂಪಿ ಹಾಗೂ ಆನೆಗೊಂದಿಗೆ ಆಗಮಿಸುವ ಪ್ರವಾಸಿಗರ ರಕ್ಷಣೆಗಾಗಿ ಈ ಹಿಂದೆ ಕಲ್ಪಿಸಲಾಗಿದ್ದ ಪೊಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ಸ್ಥಾಪಿಸಬೇಕು. ಜೊತೆಗೆ ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಕೋರಿದ್ದಾರೆ. 由

RELATED ARTICLES

Latest News