ಭೋಪಾಲ್, ಮಾ. 10: ನಾನು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ ನಲ್ಲಿ ಪ್ರಚಾರದ ವೇಳೆ ಆರ್ ಎಸ್ ಎಸ್ ವಿರುದ್ಧ ಮಾತನಾಡದಂತೆ ಹೇಳಲಾಗಿತ್ತು ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಆಡಳಿತಾರೂಢ ಬಿಜೆಪಿಗೆ ಪಕ್ಷದವರು ಸಹಾಯ ಮಾಡುವ ಬಗ್ಗೆ’ ಗುಜರಾತ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಠಿಣ ಮಾತುಗಳನ್ನು ಸಿಂಗ್ ಶ್ಲಾಘಿಸಿದರು.
ಅಹಮದಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಮೊದಲ ಕೆಲಸವೆಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರ ಎರಡು ಗುಂಪುಗಳನ್ನು ಬೇರ್ಪಡಿಸುವುದು – ಪಕ್ಷದ ಸಿದ್ಧಾಂತವನ್ನು ತಮ್ಮ ಹೃದಯದಲ್ಲಿ ಇಟ್ಟು ಕೊಂಡು ಸಾರ್ವಜನಿಕರೊಂದಿಗೆ ನಿಲ್ಲುವವರು ಮತ್ತು ಸಾರ್ವಜನಿಕರಿಂದ ಸಂಪರ್ಕ ಕಡಿದುಕೊಂಡ ಇತರರು. ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯೊಂದಿಗೆ ಇದ್ದಾರೆ ಎಂದು ಹೇಳಿದ್ದರು.
ಅಂತಹ ನಾಯಕರು ಮತ್ತು ಕಾರ್ಯಕರ್ತರನ್ನು ಫಿಲ್ಟರ್ ಮಾಡುವ ಅಗತ್ಯವನ್ನು ಲೋಕಸಭಾ ಸದಸ್ಯರು ಒತ್ತಿಹೇಳಿದ್ದರು ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಅಭಿನಂದಿಸಿದ ಸಿಂಗ್.
ನಾನು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಚಾರ ಮಾಡಲು ಗುಜರಾತ್‌ಗೆ ಹೋದಾಗ, ನನಗೆ ಆರ್‌ಎಸ್‌ಎಸ್ ವಿರುದ್ಧ ಮಾತನಾಡದಂತೆ ನನಗೆ ಸೂಚನೆ ನೀಡಲಾಗಿತ್ತು. ಇಂತಹ ಕಲೆವು ಕ್ರಮಗಳಿಂದಲೇ ಇಂದು ಬಿಜೆಪಿ ಪ್ರಬಲವಾಗಿ ಬೆಳೆಯುವುದಕ್ಕೆ ಕಾರಣವಾಗಿದೆ ಎಂದಿದ್ದಾರೆ.|