Tuesday, March 11, 2025
Homeಮನರಂಜನೆಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ಧರಾಮಯ್ಯ

ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

“ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು. ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು
ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು. ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

RELATED ARTICLES

Latest News