Wednesday, March 12, 2025
Homeರಾಜ್ಯಕೊಪ್ಪಳ : ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಹೋಂ ಸ್ಟೇ, ರೆಸಾರ್ಟ್‌ಗಳ ಪೊಲೀಸರ ದಾಳಿ

ಕೊಪ್ಪಳ : ಸಾಮೂಹಿಕ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಹೋಂ ಸ್ಟೇ, ರೆಸಾರ್ಟ್‌ಗಳ ಪೊಲೀಸರ ದಾಳಿ

Koppal: Police raid homestays, resorts in wake of gang rape case

ಕೊಪ್ಪಳ, ಮಾ.11-ವಿದೇಶಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಎಚ್ಚತ್ತ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ತಡ ರಾತ್ರಿ ದಾಳಿ ಮಾಡಿದೆ.

ಹೋಂ ಸ್ಟೇ, ರೆಸಾರ್ಟ್‌ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ, ಸಂಪೂರ್ಣ ತಪಾಸಣೆ ನಡೆಸಿ ಅಕ್ರಮ ಚಟುವಟಿಕೆ ನಡೆಸಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಗಂಗಾವತಿಯಲ್ಲಿ ರೆಸಾರ್ಟ್ ಮಾಲೀಕರ ಜೊತೆ ಸಭೆ ನಡೆಸಿ ಪಾರ್ಮ್ ಸಿ ಯನ್ನು ಕಡ್ಡಾಯವಾಗಿ ಭರ್ತಿ ಮಾಡಿ, ವಿದೇಶಿಗರ ಬಗ್ಗೆ ಮಾಹಿತಿ ನೀಡಬೇಕು. ಅನೈತಿಕ ಚಟುವಟಿಕೆ ಬಗ್ಗೆ ಎಚ್ಚರವಹಿಸಬೇಕು, ಇನ್ನು ರೆಸಾರ್ಟ್‌ಗಳಲ್ಲಿ ಗಾಂಜಾ ಪೂರೈಕೆ ಸೇರಿದಂತೆ ಯಾವುದೇ ಅಕ್ರಮ ದಂದೆ ನಡೆಸಿದರೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಎಚ್ಚರಿಕೆ ನೀಡಿದ್ದರು.

ಕೊಪ್ಪಳ ಅತ್ಯಾಚಾರ ಪ್ರಕರಣದಿಂದ ಹಂಪಿ ಪ್ರವಾಸೋದ್ಯಮಕ್ಕೆ ತೀವ್ರ ಹೊಡೆತ ನೀಡಿದೆ,ಈ ನಡುವೆ ಜಿಲ್ಲೆಯಲ್ಲಿರುವ ಅನೇಕ ಹೋಮ್ ಸ್ಟೇ, ರೆಸಾರ್ಟ್‌ಗಳು ವಿದೇಶಿಗರಿಗೆ ಮೋಜು ಮಸ್ತಿ ಹೆಸರಲ್ಲಿ ಅಕ್ರಮ ದಂದೆಯನ್ನು ಕೂಡ ಮಾಡುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರುತ್ತಿದ್ದವು. ವಿದೇಶಿಗರಿಗೆ, ಕೆಲ ರೆಸಾರ್ಟ್, ಹೋಮ್ ಸ್ಟೇಗಳಲ್ಲಿ ಅನಧಿಕೃತವಾಗಿ ಗಾಂಜಾ ಪೂರೈಕೆ, ಬೇಕಾದ ಮದ್ಯ ಪೂರೈಕೆ ಮಾಡುವ ಕೆಲಸ ಕೂಡಾ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದವು.

RELATED ARTICLES

Latest News