Friday, March 14, 2025
Homeಜಿಲ್ಲಾ ಸುದ್ದಿಗಳು | District Newsಹಾಸನ / Hassanಬೇಲೂರಿನಲ್ಲಿ ಕಟ್ಟಡದ ಸಜ್ಜಾ ಕುಸಿದು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಬೇಲೂರಿನಲ್ಲಿ ಕಟ್ಟಡದ ಸಜ್ಜಾ ಕುಸಿದು ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

Woman dies after being seriously injured after building collapses in Belur

ಹಾಸನ, ಮಾ.14-ಹಳೆಯ ಕಟ್ಟಡದ ಸಜ್ಜಾ ಕುಸಿದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಘಟನೆಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು.ಕೆಲವು ತಿಂಗಳ ಹಿಂದೆ ಅವರ ಪತಿ ಗೋಪಿ ಸಾವನ್ನಪ್ಪಿದ್ದರು ಇಂದು ಆಸ್ಪತ್ರೆಯಲ್ಲಿ ಜ್ಯೋತಿ ಕೊನೆಯುಸಿರೆಳೆದಿದ್ದು ಈಗ ಅವರ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.

ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರು.

RELATED ARTICLES

Latest News