ಬೆಂಗಳೂರು,ಮಾ.14- ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಲಯಕ್ಕೆ ನಾಳೆ ಖುದ್ದು ಹಾಜರಾಗಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪರಪ್ಪ ಹಾಗೂ ಇತರ ಆರೋಪಿಗಳಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪಿನಿಂದಾಗಿ ಕಾನೂನು ಹೋರಾಟದಲ್ಲಿ ಯಡಿಯೂರಪ್ಪನವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಬಂಧನದ ಭೀತಿಯಲ್ಲಿದ್ದ ಅವರಿಗೆ ಖುದ್ದು ಹಾಜರಾತಿಗೂ ವಿನಾಯಿತಿ ಸಿಕ್ಕಿದೆ. ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ಕಾಗ್ನಿಜೆನ್ಸ್ ಸಮನ್ಸ್ ಆದೇಶಕ್ಕೆ ತಡೆ ನೀಡಿದ್ದಾರೆ.
ಸಿಐಡಿಯನ್ನು ಪ್ರತಿವಾದಿಯನ್ನಾಗಿಸಿ ವಕೀಲರಾದ ಸಂದೀಪ್ ಪಾಟೀಲ್ ಅವರು ಯಡಿಯೂರಪ್ಪ ಪರ ವಕಾಲತ್ತು ವಹಿಸಿದ್ದರು. ಜೊತೆಗೆ ಹಿರಿಯ ವಕೀಲ ಸಿ.ಬಿ.ನಾಗೇಶ್ ವಾದ ಮಾಡಿದ್ದರು.
ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯಕ್ ವಾದಿಸಿದ್ದರು.
ಐಪಿಸಿ ಸೆಕ್ಷನ್‌ಗಳಾದ 204 ಮತ್ತು 214ರ ಅಡಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ವಿಚಾರಣಾಧೀನ ನ್ಯಾಯಾಲಯವು ಯಾಂತ್ರಿಕವಾಗಿ ಸಂಜ್ಞೇಯ (ಕಾಗ್ನಿಜೆನ್‌್ಸ) ಪರಿಗಣನೆ ಮಾಡಿದೆ. ಲೈಂಗಿಕ ದೌರ್ಜನ್ಯ ಅಪರಾಧ ಎಸಗಿರುವುದನ್ನು ಸಾಬೀತುಪಡಿಸುವ ಯಾವೊಂದು ದಾಖಲೆಯೂ ದೂರು, ಎಫ್‌ಐಆರ್ ಅಥವಾ ಆರೋಪ ಪಟ್ಟಿಯಲ್ಲಿ ಇಲ್ಲ. ಕೇವಲ ದುರುದ್ದೇಶ ಮತ್ತು ಸಮಾಜದಲ್ಲಿ ತಾವು ಗಳಿಸಿರುವ ಗೌರವವನ್ನು ಹಾಳು ಮಾಡಲು ಸುಳ್ಳು ದೂರು ದಾಖಲಿಸಲಾಗಿದೆ.
ಸಿಐಡಿ ತನಿಖಾಧಿಕಾರಿಗಳು ಹಲವು ಸ್ವತಂತ್ರ ಸಾಕ್ಷಿಗಳ ವಿಚಾರಣೆಗೊಳಿಸಿದ ನಂತರವೂ ತಾವು ಲೈಂಗಿಕ ದೌರ್ಜನ್ಯ ಎಸಗಿರುವುದಕ್ಕೆ ಯಾವ ಸಾಕ್ಷಿಯನ್ನೂ ಒದಗಿಸಿಲ್ಲ. ಕೇವಲ ಸಂತ್ರಸ್ತೆಯ ಹೇಳಿಕೆ ಆಧರಿಸಿ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಯಡಿಯೂರಪ್ಪ ಆಕ್ಷೇಪಿಸಿದ್ದರು.
ಈ ಹಿಂದೆ ಹೊರಡಿಸಿರುವ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ವಿಶೇಷ ನ್ಯಾಯಾಲಯ ಸಂಜ್ಞೇ ತೆಗೆದಕೊಂಡು ಸಮನ್‌್ಸ ಜಾರಿ ಮಾಡಿದೆ. ಈ ಆದೇಶವನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥವಾಗುವರೆಗೆ ಸಮನ್‌್ಸಗೆ ತಡೆ ನೀಡಬೇಕು ಎಂದು ಕೋರಿದ್ದರು.
ಒಂದು ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸಿರಲಿಲ್ಲ. ಈ ಹಿಂದೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಯಡಿಯೂರಪ್ಪ ಪರ ವಕೀಲರು ವಾದಿಸಿದ್ದರು.
ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದ್ದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಸಮನ್ಸ್ ಗೆ ತಡೆ ನೀಡದಂತೆ ಮನವಿ ಮಾಡಿದ್ದರು.
ವಿಶೇಷ ನ್ಯಾಯಾಲಯವು 2024ರ ಜುಲೈ 4ರಂದು ಸಂಜ್ಞೇ ತೆಗೆದುಕೊಂಡು ಜಾರಿಗೊಳಿಸಿದ ಸಮನ್‌್ಸ ರದ್ದತಿಗೆ ಕೋರಿ ಈ ಹಿಂದೆ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು 2025ರ ಫೆಬ್ರವರಿ 7ರಂದು ವಜಾಗೊಳಿಸಿದ್ದ ಹೈಕೋರ್ಟ್, ವಿಶೇಷ ನ್ಯಾಯಾಲಯವು ತೆಗೆದುಕೊಂಡಿದ್ದ ಸಂಜ್ಞೇ ರದ್ದುಪಡಿಸಿತ್ತು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್‌ನ ಆದೇಶಗಳನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ ಸಂಜ್ಞೇ ತೆಗೆದುಕೊಂಡು ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿತ್ತು. ಅಲ್ಲದೇ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಏನಿದು ಪ್ರಕರಣ:
2024ರ ಫೆಬ್ರವರಿ 2ರಂದು ಸಹಾಯ ಯಾಚಿಸಿ ಮನೆಗೆ ತೆರಳಿದ್ದ ನನ್ನ 17 ವರ್ಷದ ಮಗಳಿಗೆ ಬಿ ಎಸ್ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸಂತ್ರಸ್ತೆ ತಾಯಿ ಸದಾಶಿವನಗರ ಠಾಣೆಗೆ ಮಾರ್ಚ್ 14ರಂದು ದೂರು ನೀಡಿದ್ದರು.
ದೂರಿನನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಿ ಎಸ್ ಯಡಿಯೂರಪ್ಪ ಆಪ್ತರಾದ ರುದ್ರೇಶ್, ಮರಿಸ್ವಾಮಿ, ವೈ.ಎಂ.ಅರುಣ್ ಪ್ರಕರಣದ ಸಾಕ್ಷ್ಯ ನಾಶ ಹಾಗೂ ಬೆದರಿಕೆ ಒಡ್ಡಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದರು.
ದೂರಿನನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ಆಪ್ತರಾದ ರುದ್ರೇಶ್, ಮರಿಸ್ವಾಮಿ, ವೈ.ಎಂ.ಅರುಣ್ ಪ್ರಕರಣದ ಸಾಕ್ಷ್ಯ ನಾಶ ಹಾಗೂ ಬೆದರಿಕೆ ಒಡ್ಡಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ, ಇತರ ಮೂವರು ಆರೋಪಿಗಳ ವಿರುದ್ಧ ಪೋಕ್ಸೋ ಹಾಗೂ ಸಾಕ್ಷ್ಯ ನಾಶ ಸಂಬಂಧ 2024 ರ ಜುಲೈನಲ್ಲಿ ದೋಷ ಆರೋಪ ಪಟ್ಟಿ ಸಲ್ಲಿಸಿದ್ದರು.