Friday, March 14, 2025
Homeರಾಜ್ಯಕೇಂದ್ರ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್‌ ಅಸಮಾಧಾನ

ಕೇಂದ್ರ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್‌ ಅಸಮಾಧಾನ

Minister Lakshmi Hebbalkar unhappy with the central government

ಬೆಂಗಳೂರು, ಮಾ.14– ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷಿ ಹೆಬ್ಬಾಳಕರ್‌ ವಿಧಾನಪರಿಷತ್‌ಗೆ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂ. ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂ.ಅನುದಾನ ಹೊರೆಯಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಿದ್ದು ಕಾಂಗ್ರೆಸ್‌‍ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆ 2 ಸಾವಿರ ರೂ. ಗೌರವಧನವನ್ನು ಹೆಚ್ಚಿಸಲಾಗಿತ್ತು. ಆದರೆ ಕಳೆದ ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಒಂದು ರೂ. ಕೂಡ ಹೆಚ್ಚಿಸಿರಲಿಲ್ಲ ಎಂದು ಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದ್ದು, ಇದರಲ್ಲಿ ನಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದರೂ, ಈವರೆಗೂ ನಯಾಪೈಸೆ ಬಿಡುಗಡೆ ಮಾಡಿಲ್ಲ ಎಂದು ಪರೋಕ್ಷವಾಗಿ ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಎಂದು ತಿಳಿಸಿದರು.

RELATED ARTICLES

Latest News