ಚೆನ್ನೈ, ಮಾ. 16: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ ಅವರನ್ನು ಚೆನ್ನೈನ ಕಾರ್ಪೊರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.
ರೆಹಮಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅವರ ಅಭಿಮಾನಿಗಳು ಗಾಬ ರಿಪಡಬೇಕಿಲ್ಲ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ನಿರ್ಜಲೀಕರಣದಿಂದಾಗಿ ಸಂಗೀತಗಾರ ಎ.ಆರ್.ರೆಹಮಾನ್ ಅವರನ್ನು ತಡರಾತ್ರಿ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ಇಂದು ತಿಳಿಸಿದ್ದಾರೆ.
ಲಂಡನ್‌ನಿಂದ ವಾಪಸ್ಸಾದ ಅವರಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ಸಂಗೀತಗಾರ ರಂಜಾನ್ ಉಪವಾಸದಲ್ಲಿದ್ದ ಕಾರಣ ನಿರ್ಜಲೀಕರಣದಿಂದಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು.ಅವರು ಈಗ ಅಪಾಯದಿಂದ ಪಾರಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ ಎಂದು ಅವರು ಹೇಳಿದರು.