Monday, March 17, 2025
Homeಜಿಲ್ಲಾ ಸುದ್ದಿಗಳು | District Newsದಕ್ಷಿಣ ಕನ್ನಡ | Dakshina Kannadaಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

Boy dies after accidentally falling from 5th floor of apartment

ಮಂಗಳೂರು,ಮಾ.16-ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಂಗಳೂರಿನ ಮೇರಿಹಿಲ್‌ನಲ್ಲಿರುವ ಮಾತಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಈ ದುರಂತ ಸಂಭವಿಸಿದೆ.

ಮೃತ ಬಾಲಕನನ್ನು ಸಮರ್ಜಿತ್ (13) ಎಂದು ಗುರುತಿಸಲಾಗಿದೆ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ.

ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

RELATED ARTICLES

Latest News