Tuesday, March 18, 2025
Homeರಾಜ್ಯಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ : ಸಿಎಂ ವಾಗ್ದಾಳಿ

ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ : ಸಿಎಂ ವಾಗ್ದಾಳಿ

BJP has copied our guarantees: CM's attack

ಬೆಂಗಳೂರು,ಮಾ.17- ಕಾಂಗ್ರೆಸ್‌‍ ಸರ್ಕಾರದ ಪ್ರಣಾಳಿಕೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮೆಚ್ಚುಗೆಗೆ ಪಾತ್ರವಾಗಿವೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರೂ ನಮ ಯೋಜನೆಗಳನ್ನು ನಕಲು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿಶ್ವಸಂಸ್ಥೆಯ ಪ್ರತಿನಿಧಿಗಳು ಪ್ರಶಂಸಿಸಿದ್ದಾರೆ. ಜಾಗತಿಕವಾಗಿ ಯೂನಿವರ್ಸಲ್‌ ಬೇಸಿಕ್‌ ಇನ್ಕಂ ಆಧಾರದ ಮೇಲೆ ಜನರ ಖರೀದಿ ಸಾಮರ್ಥ್ಯವನ್ನು ಅಂದಾಜಿಸಲಾಗುತ್ತದೆ.

ಭಾರತದಲ್ಲಿ ಜನರ ಖರೀದಿ ಸಾಮರ್ಥ್ಯ ಕುಗ್ಗಿದೆ. ಕರ್ನಾಟಕದಲ್ಲಿ ಪಂಚಖಾತ್ರಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿ ನೀಡುವ ಪ್ರಯತ್ನಗಳಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಮಾಸಾಶನ ಪಡೆಯುವ ಮಹಿಳೆಯರು ಅದರಿಂದ ಹೋಟೆಲ್‌, ಬಟ್ಟೆ ಅಂಗಡಿ ಸೇರಿದಂತೆ ಅನೇಕ ವ್ಯಾಪಾರ ಚಟುವಟಿಕೆಗಳನ್ನು ಆರಂಭಿಸಿ ಅಭಿವೃದ್ಧಿಯತ್ತ ಹೆಜ್ಜೆ ಹಾಕಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌‍ ಪಕ್ಷ ಪಂಚಖಾತ್ರಿ ಯೋಜನೆಗಳನ್ನು ಪ್ರಕಟಿಸಿದಾಗ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದರು. ಬಿಜೆಪಿಯ ಎಲ್ಲಾ ನಾಯಕರೂ ಯೋಜನೆಗಳನ್ನು ವಿರೋಧ ಮಾಡಿದರು. ನಾವು ಅಧಿಕಾರಕ್ಕೆ ಬಂದು ಪಂಚಖಾತ್ರಿಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದ ಬಳಿಕ ಬಿಜೆಪಿ ಬೇರೆಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನಮ ಯೋಜನೆಗಳನ್ನು ನಕಲು ಮಾಡಲು ಶುರು ಮಾಡಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಹರಿಯಾಣ, ದೆಹಲಿ ಸೇರಿದಂತೆ ವಿಧಾನಸಭೆ ಚುನಾವಣೆಗಳು ನಡೆದ ಕಡೆಯಲ್ಲೆಲ್ಲಾ ಗ್ಯಾರಂಟಿಗಳ ಭರವಸೆ ನೀಡಿ ವಿಚಾರ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮೋದಿ ಕ ಗ್ಯಾರಂಟಿ ಎಂದು ಜಾಹೀರಾತು ನೀಡಿದರು. ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುವುದಾಗಿದ್ದರೆ ಟೀಕೆ ಮಾಡಿದ್ದೇಕೆ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌, ದೆಹಲಿಯಲ್ಲಿ ಆಮ್‌ ಆದಿ ಪಕ್ಷ ಜಾರಿ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ಕಾಂಗ್ರೆಸ್‌‍ ಕಾಪಿ ಮಾಡಿತ್ತು. ಅದನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ ಎಂದು ತಿರುಗೇಟು ನೀಡಿದರು.

ಸಚಿವ ಎಂ.ಬಿ.ಪಾಟೀಲ್‌, ಮಹಾರಾಷ್ಟ್ರದಲ್ಲಿ ನಮ ಎಲ್ಲಾ ಯೋಜನೆಗಳನ್ನು ನಕಲು ಮಾಡಲಾಗಿದೆ ಎಂದು ಲೇವಡಿ ಮಾಡಿದರು. ಉತ್ತರ ಮುಂದುವರೆಸಿದ ಸಿದ್ದರಾಮಯ್ಯನವರು ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿರುವ ಚಂದ್ರಬಾಬು ನಾಯ್ಡು ಅವರ ಸರ್ಕಾರ ಸಚಿವರು, ಅಧಿಕಾರಿಗಳ ನಿಯೋಗ, ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರದ ಸಾರಿಗೆ ಸಚಿವ ಪ್ರತಾಪ್‌ಸರ್‌ ನಾಯಕ್‌ ಮತ್ತು ಅಧಿಕಾರಿಗಳ ನಿಯೋಗ, ಕೇರಳದ ಸಚಿವರ ಮತ್ತು ಅಧಿಕಾರಿಗಳ ನಿಯೋಗ ಕರ್ನಾಟಕಕ್ಕೆ ಬಂದು ಶಕ್ತಿ ಯೋಜನೆ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಅಧ್ಯಯನ ನಡೆಸಿದೆ.

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ಅಧ್ಯಕ್ಷತೆಯಲ್ಲಿರುವ ಕೇಂದ್ರ ಸರ್ಕಾರದ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಪಬ್ಲಿಕ್‌ ಅಡಿನಿಸ್ಟೇಟರ್‌ ಸಂಸ್ಥೆ ಗ್ಯಾರಂಟಿ ಯೋಜನೆಗಳನ್ನು ಪ್ರಶಂಸಿಸಿ ಕೆಲವು ಸಲಹೆಗಳನ್ನು ನೀಡಿದೆ. ಅದರ ಮುಖ್ಯಸ್ಥ ಜಿತೇಂದ್ರ ಸಿಂಗ್‌, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ. ಇಷ್ಟೆಲ್ಲಾ ಇದ್ದರೂ ವಿರೋಧಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿರುವುದು ಸರಿಯೇ?, ಕಲ್ಲು ಸಿಗುತ್ತದೆಯೇ? ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದರು.

ರಾಜಕೀಯಪ್ರೇರಿತರಾಗಿ ಹೇಳಿಕೆ ನೀಡುವುದನ್ನು ಬಿಟ್ಟು ಈಗಲಾದರೂ ಸಕಾರಾತಕ ಟೀಕೆ ಮಾಡುವುದನ್ನು ಕಲಿತುಕೊಳ್ಳಿ. ವಿರೋಧಪಕ್ಷಗಳು ಟೀಕೆ ಮಾಡುವುದನ್ನು ನಾನು ಬೇಡ ಎನ್ನುವುದಿಲ್ಲ. ಅದರಿಂದ ಜನರಿಗೆ ತೊಂದರೆಯಾಗುತ್ತಿರುವುದನ್ನು ಸರ್ಕಾರದ ಗಮನಕ್ಕೆ ತರಲಿ ಎಂದು ಹೇಳಿದರು.

RELATED ARTICLES

Latest News