ವಾಷಿಂಗ್ಟನ್,ಮಾ.18– ಒಂಭತ್ತು ತಿಂಗಳಿಗೂ ಹೆಚ್ಚು ಕಾಲ ಬಾಹ್ಯಕಾಶದಲ್ಲಿ ಅದ್ಭುತ ಸಾಹಸ ಮುಗಿಸಿ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಳೆ ಬೆಳಗ್ಗಿನಜಾವ ಭೂಮಿಗೆ ವಾಪಸ್ಸಾಗಲಿದ್ದಾರೆ. ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಅವರು ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಮಂಗಳವಾರ ಸಂಜೆ 5.57ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27) ಭೂಮಿಗೆ ತಲುಪಲಿದ್ದಾರೆ ಎಂದು ನಾಸಾ ತಿಳಿಸಿದೆ.
ಸುನಿತಾ ವಿಲಿಯಮ್ಸ್, ಬುಚ್ ವಿಲ್ಲೋರ್ ಮತ್ತು ಮತ್ತೊಬ್ಬ ಅಮೇರಿಕನ್ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೋರ್ಬುನೋವ್ ಅವರು ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಫೋರಿಡಾ ಕರಾವಳಿಯಲ್ಲಿ ಸ್ಪೇಸ್‌ಎಕ್ಸ್‌ನ ಡ್ರಾಗನ್ ಕ್ರಾಫ್ಟ್ ಬಾಹ್ಯಾಕಾಶ ನೌಕೆಯಲ್ಲಿ ಇಳಿಯಬಹುದು ಎಂದು ನಾಸಾ ತಿಳಿಸಿದೆ.
ಮೊದಲು ಎಂಟೇ ದಿನಗಳ ಕಾಲ ಅಂತರಿಕ್ಷದಲ್ಲಿರುವ ಯೋಜನೆ ಇತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದ 9 ತಿಂಗಳು ಅಂತರಿಕ್ಷದಲ್ಲೇ ಇರಬೇಕಾಯಿತು. ಈಗ ಸುನೀತಾ ವಿಲಿಯಮ್ಸ್, ವಿಲ್ಲೋರ್ ಮತ್ತು ಕ್ರೂ-9 ಕಾರ್ಯಾಚರಣೆಯಲ್ಲಿನ ಇನ್ನಿಬ್ಬರು ಸದಸ್ಯರು ಸ್ಪೇಸ್‌ಎಕ್ಸ್ ಟ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶದಿಂದ ಭೂಮಿಗೆ ವಾಪಸ್ ಬರುತ್ತಿದ್ದಾರೆ. ಬೋಯಿಂಗ್ ಸ್ಟಾರೈನರ್ ಬಾಹ್ಯಾಕಾಶ ನೌಕೆಯಲ್ಲಿ ಸುನೀತಾ ಮತ್ತು ವಿಲ್ಲೋರ್ ಕಳೆದ ವರ್ಷ ಜೂನ್‌ನಲ್ಲಿ ಅಂತರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ತೆರಳಿದ್ದರು.
ಹೋದ ಸ್ವಲ್ಪ ದಿನದಲ್ಲೇ ಸ್ಟಾರ್‌ಲೈನರ್‌ನಲ್ಲಿ ಹೀಲಿಯಂ ಸೋರಿಕೆ ಮತ್ತು ಇಂಜಿನ್ ಸಮಸ್ಯೆ ಕಂಡು ಬಂತು. ಇದರಿಂದ ಅವರ ವಾಪಸಾತಿ ಅಸುರಕ್ಷಿತ ಎಂದು ಪರಿಗಣಿಸಿ ಅವರು ಅಲ್ಲೆ ಉಳಿದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಯಿತು.
ಈ ಸಮಸ್ಯೆಯಿಂದಾಗಿ ನಾಸಾ ಗಗಮಯಾತ್ರಿಗಳು ವಾಪಸ್ ಬರುವುದು ವಿಳಂಬವಾಗುತ್ತೆ ಎಂದು ಒಪ್ಪಿಕೊಂಡರು. ನಂತರ 2025 ರಲ್ಲಿ ವಿಲಿಯಮ್ಸ್ ಮತ್ತು ವಿಕ್ಟೋರ್ ಅವರನ್ನ ಸ್ಪೇಸ್‌ಎಕ್ಸ್ ಮಿಷನ್ ಮೂಲಕ ವಾಪಸ್ ಕರೆಸೋಣ ಅಂತ ಯೋಚಿಸಿತ್ತು.
ಸೆಪ್ಟೆಂಬರ್ 2024:
ಸ್ಟಾರೈನರ್ ಬೇರೆ ಬಾಹ್ಯಾಕಾಶ ನೌಕೆಗಳು ಬರೋಕೆ ಜಾಗ ಮಾಡಿಕೊಡುವುದಕ್ಕಾಗಿ ಸ್ಟಾರ್ರೈನರ್ ಗಗನಯಾತ್ರಿಗಳಿಲ್ಲದೆ ಭೂಮಿಗೆ ಮರಳಿತು. ವಿಲಿಯಮ್ಸ್ ಮತ್ತು ವಿಲ್ಲೋರೆ ಸುರಕ್ಷಿತ ವಾಪಸ್ ಬರಲು ವಿಳಂಬವಾಗುತ್ತೆ ಎಂದು ಮನಗೊಂಡು ಸ್ಟಾರಯನರ್‌ನನ್ನು ಭೂಮಿಗೆ ವಾಪಸ್ ಕರೆಸಿದ್ದರು.
ವಿಲಿಯಮ್ಸ್ ಮತ್ತು ವಿಲ್ಲೋರ್ 9 ತಿಂಗಳ ಕಾಲ ಅಂತರಿಕ್ಷದಲ್ಲಿದ್ದು ಅನೇಕ ಸಾಧನೆ ಮಾಡಿದ್ದಾರೆ. 150ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ಬಾಹ್ಯಾಕಾಶದಲ್ಲಿ ನಡೆಯುತ್ತಿರುವ ಸಂಶೋಧನೆಗೆ ಗಣನೀಯ ಕೊಡುಗೆ ನೀಡಿದ್ದಾರೆ.
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಲೋರ್ ಬಾಹ್ಯಾಕಾಶದಲ್ಲಿ 284 ದಿನಗಳನ್ನು ಕಳೆದಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಇಬ್ಬರೂ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ದೇಹ ಭಾರವಿಲ್ಲ ಎನ್ನುವಂತೆ ಅವರಿಗೆ ಅನಿಸುತ್ತದೆ.
ಜೊತೆಗೆ ಅವರ ದೇಹದ ಚರ್ಮ ಮೊದಲಿನಂತೆ ಇರುವುದಿಲ್ಲ. ಅದು ಸಹಜ ಸ್ಥಿತಿಗೆ ಬರಬೇಕೆಂದರೆ ಸಮಯ ತೆಗೆದುಕೊಳ್ಳುತ್ತದೆ. ಗಗನಯಾತ್ರಿಗಳ ದೇಹದ ಮೇಲೆ ಭೂಮಿಯ ಗುರುತ್ವಾಕರ್ಷಣೆಯ ಕೊರತೆಯಿಂದ ಮೂಳೆಯ ಸಾಂದ್ರತೆ ಮತ್ತು ಸ್ನಾಯು ಕ್ಷೀಣತೆ ಅನುಭವಿಸುತ್ತಾರೆ.
ಶೂನ್ಯ ಗುರುತ್ವಾಕರ್ಷಣೆ ಮತ್ತು ಹೆಚ್ಚಿನ ವಿಕಿರಣದಲ್ಲಿ ದೀರ್ಘಕಾಲ ಬಾಹ್ಯಾಕಾಶದಲ್ಲಿ ಉಳಿಯುವುದರಿಂದ ಮೂಳೆಗಳ ದೌರ್ಬಲ್ಯ, ದೃಷ್ಟಿಯ ಮೇಲೆ ಪರಿಣಾಮ ಮತ್ತು ದೇಹದ ಸಮತೋಲನ ನಷ್ಟದಂತಹ ಸಮಸ್ಯೆಗಳು ಉಂಟಾಗಬಹುದು ಎಂಬುದು ಗಮನಿಸಬೇಕಾದ ಸಂಗತಿ. ವಿಕಿರಣವು ಕ್ಯಾನ್ಸರ್ ಮತ್ತು ನರಮಂಡಲದ ಸಮಸ್ಯೆಗಳನ್ನು ಉಂಟುಮಾಡಬಹುದು. ಅಲ್ಲದೆ, ರೋಗನಿರೋಧಕ ಶಕ್ತಿ ಕಡಿಮೆಯಾಗಬಹುದು.
ಭೂಮಿಗೆ ಬಂದ ಬಳಿಕ ಇಲ್ಲಿಯ ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳಲು ಬಾಹ್ಯಾಕಾಶ ಸಂಸ್ಥೆಗಳು ಪುನರ್ವಸತಿ ಕೇಂದ್ರ ತೆರೆಯುತ್ತವೆ. ಅದರಡಿ ಹಿಂದಿರುಗುವ ಗಗನಯಾತ್ರಿಗಳಿಗೆ ಭೂಮಿ ಮೇಲೆ ಒಗ್ಗಿಕೊಳ್ಳಲು ಬೇಕಾದ ಎಲ್ಲಾ ರೀತಿಯ ಸಹಾಯ ಮಾಡಲಿದೆ. ನೆಲದ ಮೇಲೆ ನಡೆಯಲು ಸಹಾಯ, ಆಹಾರ, ಅಗತ್ಯ ಔಷಧಗಳನ್ನು ಒದಗಿಸುವುದು, ಕಾಲುಗಳನ್ನು ಬಲಪಡಿಸುವ ವ್ಯಾಯಾಮ, ಕಾಲುಗಳು ತಮ್ಮ ನಿಯಂತ್ರಣಕ್ಕೆ ಬರುವವರೆಗೂ ಮೇಲ್ವಿಚಾರಣೆ ನಡೆಯಲಿದೆ.
ನಮ್ಮ ಗಗನಯಾನಿಗಳನ್ನು ಯಶಸ್ವಿಯಾಗಿ ಕರೆತರುವ ಕೆಲಸ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಆರಂಭವಾಗಿದೆ. ಫೋರಿಡಾದ ಕಡಲ ತೀರಕ್ಕೆ ಬರುವ ನಿರೀಕ್ಷೆಯಿದೆ. ನಾಸಾ ಮತ್ತು ಸ್ಪೇಸ್ ಎಕ್ಸ್ ಜಂಟಿ ಪ್ರಯತ್ನದ ಮೂಲಕ ವಾಪಸ್ ಕರೆತರುವ ಕಾರ್ಯಚರಣೆ ಇದಾಗಿದೆ ಎಂದು ನಾಸಾ ತಿಳಿಸಿದೆ.