Wednesday, March 19, 2025
Homeರಾಜ್ಯಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ : ಎಂ.ಬಿ.ಪಾಟೀಲ್‌

ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ : ಎಂ.ಬಿ.ಪಾಟೀಲ್‌

Precautionary measures to prevent misuse of money by middlemen: M.B.Patil

ಬೆಂಗಳೂರು,ಮಾ.18- ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವಿಧಾನಪರಿಷತ್‌ನಲ್ಲಿ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರು, ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯುನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ನಲ್ಲಿ ಮಧ್ಯ ವರ್ತಿಗಳಿಂದ ಹಣ ದುರುಪಯೋಗ ಆಗುತ್ತಿದೆ ಎಂದು ಸಚಿವರ ಗಮನಸೆಳೆದರು.

ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹವರ್ತಿಗಳಿಗೆ ಟೆಂಡರ್‌ ನೀಡಲು ಕಾನೂನಿನಲ್ಲಿ ಅವಕಾಶವಿದೆ. ನಿಯಮಗಳನ್ನು ಬಿಟ್ಟು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಒಂದು ವೇಳೆ ಸದಸ್ಯರು ನಿರ್ಧಿಷ್ಟವಾದ ಪ್ರಕರಣಗಳನ್ನು ಗಮನಕ್ಕೆ ತಂದರೆ ಗಮನಹರಿಸುವುದಾಗಿ ಆಶ್ವಾಸನೆ ನೀಡಿದರು.

RELATED ARTICLES

Latest News