ಬೆಂಗಳೂರು, ಮಾ.19- ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಕುಲಾ ಅನುರಾಧಾ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು ನಟಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ರನ್ಯಾ ರಾವ್ ಬಹುಭಾಷಾ ನಟಿ ಮತ್ತು ಸಮಾಜದಲ್ಲಿ ಗೌರವ ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ದೂರುದಾರರು, ನಟಿಯ ವಿರುದ್ಧ ಯತ್ನಾಳ್ ಅವರ ಹೇಳಿಕೆಗಳು ಆಕ್ಷೇಪಾರ್ಹ, ಅಸಭ್ಯ ಮತ್ತು ಮಹಿಳೆಗೆ ಅಗೌರವ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.