ಬೆಂಗಳೂರು,ಮಾ.19– ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 35ರಿಂದ 40 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ನಂತರ ಶವಕ್ಕೆ ಬೆಂಕಿ ಹಚ್ಚಿ ಗೋಣಿ ಚೀಲದಲ್ಲಿ ತಂದು ಫ್ಲಾಟ್‌ಪಾರಂ-1ರ ಸಮೀಪ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಸುದ್ದಿ ತಿಳಿದು ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಮಹಿಳೆ ಯಾರು, ಯಾವ ಕಾರಣಕ್ಕಾಗಿ ಈ ಮಹಿಳೆಯನ್ನು ಯಾರು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ರೈಲ್ವೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.