ಮುಂಬೈ, ಮಾ. 26: ಮರಾಠಿ ಮಾತನಾಡದ ಹಿಂದಿವಾಲಾನಿಗೆ ಎಂಎನ್‌ಎಸ್ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್ ) ಕಾರ್ಯಕರ್ತರು ಮುಂಬೈನ ಡಿ ಮಾರ್ಟ್ ಸೂಪರ್ ಮಾರ್ಕೆಟ್ ಅಂಗಡಿಯ ಉದ್ಯೋಗಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಧೇರಿಯ (ಪಶ್ಚಿಮ) ವರ್ಸೊವಾದಲ್ಲಿರುವ ಡಿ-ಮಾರ್ಟ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಅಂಗಡಿಯ ಉದ್ಯೋಗಿ ಗ್ರಾಹಕರೊಬ್ಬರಿಗೆ ನಾನು ಮರಾಠಿಯಲ್ಲಿ ಮಾತನಾಡುವುದಿಲ್ಲ, ನಾನು ಹಿಂದಿಯಲ್ಲಿ ಮಾತ್ರ ಮಾತನಾಡುತ್ತೇನೆ. ನೀವು ಏನು ಮಾಡಲು ಬಯಸುತ್ತೀರೋ ಅದನ್ನು ಮಾಡಿ ಎಂದಿದ್ದ.
ಉದ್ಯೋಗಿಯ ಹೇಳಿಕೆಯ ಬಗ್ಗೆ ಎಂಎಎನ್‌ಎಸ್ ಕಾರ್ಯಕರ್ತರಿಗೆ ತಿಳಿದ ನಂತರ, ಪಕ್ಷದ ವರ್ಸೋವಾ ಘಟಕದ ಅಧ್ಯಕ್ಷ ಸಂದೇಶ್ ದೇಸಾಯಿ ನೇತೃತ್ವದ ಕಾರ್ಯಕರ್ತರ ಗುಂಪು ಅಂಗಡಿಗೆ ಹೋಗಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದೆ ಎಂದು ಆರೋಪಿಸಲಾಗಿದೆ.
ಕಪಾಳಮೋಕ್ಷ ಮಾಡಿದ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ಗಳಲ್ಲಿ ಕಾಣಿಸಿಕೊಂಡಿದೆ. ನಂತರ ಅಂಗಡಿಯ ಸಿಬ್ಬಂದಿ ತನ್ನ ವರ್ತನೆಗೆ ಕ್ಷಮೆಯಾಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.