ರಾಯ್‌ಪುರ, ಮಾ.26: ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ. ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳುವ ಮುನ್ನ ಸಿಬಿಐ ಬಘಲ್ ನಿವಾಸದಲ್ಲಿ ಶೋಧ ನಡೆಸಿದೆ ಎಂದು ವರದಿಯಾಗಿದೆ.
ಕೇಂದ್ರ ತನಿಖಾ ದಳದ (ಸಿಬಿಐ) ತಂಡಗಳು ಇಂದು ರಾಯ್ದುರ ಮತ್ತು ಭಿಲಾಯ್‌ನ್ನಲ್ಲಿರುವ ಬಫೇಲ್ ಅವರ ನಿವಾಸಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಸಿಎಂ ಅವರ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೋಧಗಳು ನಡೆಯುತ್ತಿರುವ ವಿಷಯದ ಬಗ್ಗೆ ಏಜೆನ್ಸಿ ಬಿಗಿಯಾಗಿ ಮೌನವಹಿಸಿದೆ. ಆದಾಗ್ಯೂ, ಇದು ಮಹಾದೇವ್ ಆನ್ ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಹಗರಣದೊಂದಿಗೆ ಸಂಬಂಧ ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಈ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಬಫೇಲ್ ಅವರ ಕಚೇರಿ, ಈಗ ಸಿಬಿಐ ಬಂದಿದೆ. ಮಾಜಿ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಅವರು ಏಪ್ರಿಲ್ 8 ಮತ್ತು 9 ರಂದು ಅಹಮದಾಬಾದ್ (ಗುಜರಾತ್) ನಲ್ಲಿ ನಡೆಯಲಿರುವ ಎಐಸಿಸಿ ಸಭೆಗಾಗಿ ರಚಿಸಲಾದ ಕರಡು ಸಮಿತಿ ಸಭೆಯಲ್ಲಿ ಭಾಗವಹಿಸಲು ಇಂದು ದೆಹಲಿಗೆ ತೆರಳಲಿದ್ದಾರೆ. ಅದಕ್ಕೂ ಮೊದಲು ಸಿಬಿಐ ರಾಯ್ದುರ ಮತ್ತು ಭಿಲಾಯ್ ನಿವಾಸಗಳನ್ನು ತಲುಪಿದೆ ಎಂದು ಅದು ಹೇಳಿದೆ.