Tuesday, April 1, 2025
Homeರಾಷ್ಟ್ರೀಯ | Nationalಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ಪತಿ

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ಜೀವಂತ ಸಮಾಧಿ ಮಾಡಿದ ಪತಿ

Man Discovers Wife's Affair With Tenant, Buries Him Alive In 7-Foot Pit: Cops

ಹರಿಯಾಣ, ಮಾ. 26: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ವ್ಯಕ್ತಿಯೊಬ್ಬ 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರಿಯಾಣದ ರೋಸ್ಟಕ್ನಲ್ಲಿ ನಡೆದಿದೆ. ಮಹಿಳೆ ಮೋಹದಿಂದ ಜೀವಂತ ಸಮಾಧಿಯಾದ ವ್ಯಕ್ತಿಯನ್ನು ಯೋಗ ಶಿಕ್ಷಕ ಜಗದೀಪ್ ಎಂದು ಗುರುತಿಸಲಾಗಿದೆ.

ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಜಗದೀಪ್‌ ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ ಹರ್ ದೀಪ್ ಎಂಬಾತ ತನ್ನ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು.ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ. ಯೋಗ ಶಿಕ್ಷಕರ ಮೃತದೇಹವನ್ನು ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹಕ್‌ ಬಾಬಾ ಮಸ್ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಅಲ್ಲಿ ಬಾಡಿಗೆ ಮನೆಯ ಓನರ್ ಜತೆ ಅಕ್ರಮ ಸಂಬಂಧ ಹೊಂದಿದ್ದರು.

ಕಳೆದ ಡಿಸೆಂಬರ್ 24 ರಂದು, ಹರ್ದೀಪ್ ಮತ್ತು ಅವನ ಕೆಲವು ಸ್ನೇಹಿತರು ಜಗದೀಪ್ ನನ್ನು ಅವಹರಿಸಿ, ಕೈಕಾಲುಗಳನ್ನು ಕಟ್ಟಿ, ಚಾರ್ಕಿ ದಾದ್ರಿಯಲ್ಲಿರುವ ಗುಂಡಿ ಬಳಿ ಕರೆದೊಯ್ದು ಥಳಿಸಿದ್ದಾರೆ. ಜಮೀನಿನ ಬಳಿ ಹೋಗಿ ಜೀವಂತವಾಗಿ ಸುಟ್ಟು ಬಳಿಕ ಹೂತುಹಾಕಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಿದ್ದಾರೆ.

ಕೊಲೆಯಾದ 10 ದಿನಗಳ ನಂತರ ಶಿವಾಜಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ಜಗದೀಪ್ ನಾಪತ್ತೆ ದೂರು ದಾಖಲಾಗಿತ್ತು. ಸ್ವಲ್ಪ ಸಮಯದ ಹಿಂದೆ ಜಗದೀಪ್ ಅವರ ಕರೆ ದಾಖಲೆಗಳನ್ನು ಪರಿಶೀಲಿಸುವವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಇದಾದ ನಂತರ, ಹರ್ದೀಪ್ ಮತ್ತು ಅವನ ಸ್ನೇಹಿತ ಧರ್ಮಪಾಲ್ ರನ್ನು ಬಂಧಿಸಲು ಸಾಕಷ್ಟು ಪುರಾವೆಗಳು ದೊರೆತವು.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದ ನಂತರ, ಪೊಲೀಸ್ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯ ಸಮಯದಲ್ಲಿ, ಇಬ್ಬರೂ ಕೊಲೆಯ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದ್ದಾರೆ.

RELATED ARTICLES

Latest News