Thursday, April 16, 2026
Homeರಾಷ್ಟ್ರೀಯBudget Highlights : ಪ್ರತಿ ಜಿಲ್ಲೆಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ

Budget Highlights : ಪ್ರತಿ ಜಿಲ್ಲೆಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯ ಸ್ಥಾಪನೆ

women's hostels in every district

ನವದೆಹಲಿ, ಫೆ.1- ದೇಶದ ಪ್ರತಿ ಜಿಲ್ಲೆಯಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪನೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಮಹಿಳೆಯ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಬೇಕು ಎಂಬ ಉದ್ದೇಶದಿಂದ ನಮ ಸರ್ಕಾರ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮಹಿಳಾ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಅವರು ತಮ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ನಮ ಹಲವು ಮಹತ್ವದ ಯೋಜನೆಗಳಿಂದಾಗಿ ಇದುವರೆಗೂ ಸರಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಅದೇ ರೀತಿ ಮಹಿಳಾ ಬಲವರ್ಧನೆ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಅದೇ ರೀತಿ ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್‌ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್‌ಗಳಿಗೆ ತರಬೇತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

RELATED ARTICLES

Latest News