ಬೆಂಗಳೂರು,ಏ.8– ಜನಾಕ್ರೋಶ ರ್ಯಾಲಿ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಕೇಂದ್ರ ಸರ್ಕಾರ ಕಪಾಳಮೋಕ್ಷ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಸಂದೇಶದ ಮೂಲಕ ಮಾತನಾಡಿರುವ ಅವರು, ಅಡುಗೆ ಅನಿಲ, ಪೆಟೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕೋಶ ಯಾತ್ರೆ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.
ಎಲ್‌ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಇಂದು ಆಕೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ ಆಕೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.