Saturday, April 19, 2025
Homeರಾಜ್ಯವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಆರೋಪಿ ಪೊಲೀಸರು

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಆರೋಪಿ ಪೊಲೀಸರು

Police search for accused who misbehaved with student

ಬೆಂಗಳೂರು,ಏ.8– ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿರುವ ಆರೋಪಿಯ ಬಂಧನಕ್ಕೆ ರಚಿಸಲಾಗಿರುವ ವಿಶೇಷ ತಂಡಗಳು ಈಗಾಗಲೇ 300 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿವೆ ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಆದಷ್ಟು ತ್ವರಿತಗತಿಯಲ್ಲಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಗ್ನೇಯ ವಿಭಾಗದ ಡಿಸಿಪಿ ಸಾರಾಾತೀಮ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಐದು ವಿಶೇಷ ತಂಡಗಳು ಕಾರ್ಯಾಚರಣೆ ಕೈಗೊಂಡಿದ್ದು, ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿವೆ, ಆದಷ್ಟು ಬೇಗ ಆರೋಪಿಯನ್ನು ಬಂಧಿಸುವುದಾಗಿ ಹೇಳಿದರು.

ನಾವು ಈಗಾಗಲೇ ರಾತ್ರಿಗಸ್ತು ಹೆಚ್ಚಳ ಮಾಡಿದ್ದೇವೆ, ಅಲ್ಲಲ್ಲಿ ನಾಕಾಬಂಧಿ ಮಾಡಲಾಗುತ್ತಿದೆ. ಹೆಣ್ಣು ಮಕ್ಕಳ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅಧಿಕಾರಿಗಳು ಹಾಗೂ ಸಿಬ್ಬಂಧಿಗೆ ಸೂಚನೆ ನೀಡಿದ್ದೇವೆ ಎಂದರು.

ಹೆಣ್ಣೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತಹತ್ಯೆ ಪ್ರಕರಣದ ತನಿಖೆ ಸಹ ನಡೆಯುತ್ತಿದೆ. ಕೂಲಂಕುಶವಾಗಿ ಪರಿಶೀಲಿಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮನೆಗಳ್ಳತನವಾಗುತ್ತಿರುವ ಬಗ್ಗೆ ಎಚ್ಚರದಿಂದಿರಲು ಮನೆ ಮಾಲೀಕರಿಗೆ ಸೂಚಿಸಿದ್ದು, ಈಗ ಮಕ್ಕಳಿಗೆ ಬೇಸಿಗೆ ರಜೆ ಇದೆ. ಒಂದು ದಿನಕ್ಕಿಂತ ಹೆಚ್ಚು ಮನೆಗೆ ಬೀಗ ಹಾಕಿಕೊಂಡು ಹೋಗುವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಎಂದು ತಿಳಿಸಿದ ಅವರು,ಬೆಲೆ ಬಾಳುವ ಚಿನ್ನ,ವಜ್ರದ ಆಭರಗಳನ್ನು ಮನೆಯಲ್ಲಿ ಇಟ್ಟುಕೊಳ್ಳದೆ ಆದಷ್ಟು ಬ್ಯಾಂಕ್‌ ಲಾಕರ್‌ನಲ್ಲಿಡಿ ಎಂದು ಸಲಹೆ ನೀಡಿದರು.

ಮನೆ ಮಾಲೀಕರು ಸಿಸಿ ಕ್ಯಾಮರ ಅಳವಡಿಸಿಕೊಳ್ಳಬೇಕು,ಮನೆ ಬಾಗಿಲಿಗೆ ಉತ್ತಮ ಲಾಕರ್‌ ಅಳವಡಿಕೊಳ್ಳುವ ಮೂಲಕ ನಿಮ ಮನೆಯ ಸುರಕ್ಷತೆಯನ್ನು ಕಾಪಾಡಿಕೊಳ್ಳಬೇಕು ಎಂದು ಆಯುಕ್ತರು ಮನವಿ ಮಾಡಿಕೊಂಡರು.

RELATED ARTICLES

Latest News