Saturday, April 19, 2025
Homeರಾಜ್ಯಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣ ಬಯಲಿಗೆಳೆದ ಎನ್.ಆರ್.ರಮೇಶ್

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣ ಬಯಲಿಗೆಳೆದ ಎನ್.ಆರ್.ರಮೇಶ್

N.R. Ramesh exposes another scam against Siddaramaiah government

ಬೆಂಗಳೂರು,ಏ.9- ಸಿದ್ದರಾಮಯ್ಯನವರ ಸರ್ಕಾರದಲ್ಲಿ ನಡೆದಿರುವ ಮತ್ತೊಂದು ಬೃಹತ್ ಹಗರಣವನ್ನು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಬಯಲು ಮಾಡಿದ್ದಾರೆ.ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಯೋಜನೆಯ 17,000 ಕೋಟಿ ಮೊತ್ತದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪಕ್ಕೆ ಗುರಿಯಾಗಿರುವ ಸಚಿವರಾದ ಭೈರತಿ ಸುರೇಶ್, ರಹೀಂ ಖಾನ್ ಮತ್ತು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಲೋಕಾಯುಕ್ತ ಮತ್ತು ಇಡಿಯಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲು ಮಾಡಿದ್ದಾರೆ.

ಒಳಚರಂಡಿ ಮಂಡಳಿ ಮುಖ್ಯ ಅಭಿಯಂತರರುಗಳಾದ ಚಂದ್ರಪ್ಪ ಮತ್ತು ಮುದ್ದುರಾಜಣ್ಣ ಹಾಗೂ ಪೌರಾಡಳಿತ ಇಲಾಖೆಯ ನಿರ್ದೇಶಕರಾದ ಪ್ರಭುಲಿಂಗ ಕಾವಲಿಕಟ್ಟಿ, ಅವರ ವಿರುದ್ಧವೂ ಸಹ ಪ್ರಕರಣ ದಾಖಲು ಮಾಡಿ ಹಗರಣಕ್ಕೆ ಸಂಬಂಧಿಸಿದ 7.281 ಪುಟಗಳ ಸಂಪೂರ್ಣ ದಾಖಲೆಗಳನ್ನು ಲೋಕಾಯುಕ್ತಕ್ಕೆ ನೀಡಿದ್ದಾರೆ.

ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ಶಾಸಕರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡುವಂತೆ ರಮೇಶ್ ಅವರು ರಾಜ್ಯಪಾಲರಿಗೂ ಮನವಿ ಮಾಡಿಕೊಂಡಿದ್ದಾರೆ. ಅಮೃತ್ ಯೋಜನೆಯ ಸಾವಿರಾರು ಕೋಟಿ ರೂಪಾಯಿಗಳಷ್ಟು ಅನುದಾನಗಳನ್ನು ದುರ್ಬಳಕೆ ಮಾಡಿಕೊಂಡಿರುವವರ ವಿರುದ್ಧ ತನಿಖೆಗೆ ನಡೆಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರದ
ವಸತಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಆಗ್ರಹಿಸಲಾಗಿದೆ.

ಕೇಂದ್ರ ಸರ್ಕಾರದ ಅಮೃತ್ ಯೋಜನೆಯನ್ನು ದುರುಪಯೋಗಪಡಿಸಿಕೊಂಡಿರುವವರ ವಿರುದ್ಧ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸುವಂತೆಯೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿಕೊಂಡಿದ್ದಾರೆ.

ದೇಶದ 500 ಕ್ಕೂ ಹೆಚ್ಚು ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಅಮೃತ್ ಯೋಜನೆಯ ಅನುಷ್ಠಾನಕ್ಕೆಂದು ಪ್ರತೀ ವರ್ಷ ಸರಾಸರಿ ಒಂದು ಲಕ್ಷ ಕೋಟಿ ರೂಪಾಯಿಗಳ ಅನುದಾನವನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಕ ಬಿಡುಗಡೆ ಮಾಡಲಾಗುತ್ತದೆ.

ರಾಜ್ಯದ 27 ನಗರಸಭೆ ಮತ್ತು ಪುರಸಭೆಗಳಲ್ಲಿ ಅಮೃತ್ ಯೋಜನೆ ಅನುಷ್ಠಾನಕ್ಕಾಗಿ 2023-24 ಮತ್ತು 2024-25 ರ ಸಾಲುಗಳಲ್ಲಿ ಒಟ್ಟು 16,989.66 ಕೋಟಿ ಮೊತ್ತದ ಅನುದಾನ ಘೋಷಣೆ ಮಾಡಲಾಗಿದೆ. ಈ ಸಾಲುಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವ ಯೋಜನೆಯ 16,989.66 ಕೋಟಿ ಮೊತ್ತದ ಅನುದಾನಗಳ ಪೈಕಿ ಶೇ. 75 ರಷ್ಟು ಅನುದಾನ ಇಲಾಖೆಗೆ ಬಿಡುಗಡೆಯಾಗಿದ್ದು, ಇನ್ನುಳಿದ ಶೇ 25 ರಷ್ಟು ಅನುದಾನ ಇಲಾಖೆಗೆ ಬಿಡುಗಡೆಯಾಗಬೇಕಿದೆ.

ಈ ಎರಡೂ ಇಲಾಖೆಗಳ ಪ್ರಮುಖ ಹುದ್ದೆಗಳಲ್ಲಿರುವ ಕಡುಭ್ರಷ್ಟ ಅಧಿಕಾರಿಗಳು ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಭೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್‌ಖಾನ್ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರುಗಳು 16,989.66 ಕೋಟಿ ಮೊತ್ತದ ಅನುದಾನಗಳ ಪೈಕಿ ಶೇ. 50 ಕ್ಕೂ ಹೆಚ್ಚು ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂದು ರಮೇಶ ಗಂಭೀರ ಆರೋಪ ಮಾಡಿದ್ದಾರೆ.

ಒಂದೇ ಕಾಮಗಾರಿಗೆ ಸಂಬಂಧಿಸಿದ 03 ಹಂತಗಳ ಛಾಯಾಚಿತ್ರಗಳನ್ನೇ ಹಲವಾರು ಕಾಮಗಾರಿಗಳಿಗೆ ಜೋಡಿಸಿರುವುದು. ಪೂರ್ವ ನಿಗದಿತ ಗುತ್ತಿಗೆದಾರರಿಗೆ ಮಾತ್ರವೇ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸುವ ಅವಕಾಶ ದೊರಕಿಸಿಕೊಟ್ಟಿರುವುದು ಸೇರಿದಂತೆ ಹತ್ತಾರು ಕಾನೂನು ಬಾಹಿರ ಕಾರ್ಯಗಳನ್ನು ಯಥೇಚ್ಛವಾಗಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

RELATED ARTICLES

Latest News