Friday, November 22, 2024
Homeರಾಜ್ಯಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ : ಡಿಕೆಶಿ

ಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ : ಡಿಕೆಶಿ

ಬೆಂಗಳೂರು, ನ.9- ಮೇಕೆದಾಟು ಯೋಜನೆಯನ್ನು ನಮ್ಮ ಸರ್ಕಾರ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ನಾವು ಶುರು ಮಾಡುತ್ತೇವೆ.

ವಿಚಾರಣೆಗೆ ಸಮುಯ ನಿಗದಿ ಮಾಡುವುದಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ತಿಳಿಸಿದೆ. 2018ರ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿಯನ್ನು ನಿಗದಿ ಮಾಡಿತ್ತು. ಅದನ್ನು ಬಳಸಿಕೊಳ್ಳಲು ನಾವು ಸರ್ಕಾರಿ ಆದೇಶ ಹೊರಡಿಸಿದ್ದೇವೆ. ಮೇಕೆದಾಟು ಯೋಜನೆ ಕುರಿತು ವಿಚಾರಣೆ ನಡೆಯುವ ವೇಳೆ ರಾಜ್ಯಕ್ಕೆ ಎಷ್ಟು ನೀರಿನ ಅಗತ್ಯ ಇದೆ ಎಂದು ಸಮರ್ಥ ವಾದ ಮಂಡಿಸಬೇಕಿದೆ. ಅದಕ್ಕೆ ತಯಾರಿಯಾಗಿ 24 ನೀರು ಬಳಕೆಯ ಆದೇಶ ಹೊರಡಿಸಲಾಗಿದೆ ಎಂದರು.

ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು, ಶಾಸಕರಿಗೆ ಮೊದಲ ಆದ್ಯತೆ ನೀಡಲು ನಿರ್ಧಸಲಾಗಿದೆ ಎಂದರು.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಕಾಂಗ್ರೆಸ್ ಪಕ್ಷದಲ್ಲಿ ಯಾರೇಲ್ಲಾ 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೆ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕು ಎಂಬ ಚರ್ಚೆ ಆಗಿದೆ. ಇನ್ನು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ, ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿರುವುದು ಬಹಳ ಸಂತೋಷದ ವಿಷಯ. ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದರು.

RELATED ARTICLES

Latest News