Saturday, April 19, 2025
Homeರಾಷ್ಟ್ರೀಯ | Nationalಜಮ್ಮು - ಕಾಶ್ಮೀರದ ಅಮ್ಮೂರ್ ವಲಯದಲ್ಲಿ ಭಯೋತ್ಪಾದಕರ ವಿರುದ್ಧ ಗುಂಡಿನ ಚಕಮಕಿ

ಜಮ್ಮು – ಕಾಶ್ಮೀರದ ಅಮ್ಮೂರ್ ವಲಯದಲ್ಲಿ ಭಯೋತ್ಪಾದಕರ ವಿರುದ್ಧ ಗುಂಡಿನ ಚಕಮಕಿ

Jammu Kashmir's Ammur sector

ಶ್ರೀನಗರ,ಏ.12- ಜಮ್ಮು ಮತ್ತು ಕಾಶ್ಮೀರದ ಅಮ್ಮೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಸ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.

ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್ ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ.

ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್ ಕಮಾಂಡರ್ ಆಗಿದ್ದು, ಕಿತ್ ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರತಿಕೂಲ ಭೂಪ್ರದೇಶ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ. ನಮ್ಮ ಕೆಚ್ಚೆದೆಯ ಸೈನಿಕರು ನಿರಂತರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ ಎಂದು ಅದು ಹೇಳಿದೆ. ಹೆಚ್ಚಿನ ಹಿಮಪಾತವಿರುವ ಪ್ರದೇಶಗಳಲ್ಲಿ ಮತ್ತು ಕಠಿಣ ಭೂಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ವಿಶೇಷ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೋಡಾ ಜಿಲ್ಲೆಯ ಭದೇವಾರ್ ಪ್ರದೇಶಕ್ಕೂ ಶೋಧ ಕಾರ್ಯಾಚರಣೆ ವಿಸ್ತರಿಸಲಾಗಿದೆ. ಜಮ್ಮು ಪ್ರದೇಶದ ವಿವಿಧ ಗುಡ್ಡಗಾಡು ಪ್ರದೇಶಗಳ ನಡುವಿನ ಭಯೋತ್ಪಾದಕರ ಚಲನವಲನಗಳ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ವವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಯಾವುದೇ ಯೋಧರಿಗೆ ಗಾಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಕಾರ್ಯ ನಡೆಯುತ್ತಿದೆ.

ಅಕ್ಟೋರ್ ಖೇರಿ ಭಟ್ಟಲ್ ಪ್ರದೇಶದ ಮುಂಭಾಗದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವನಗಳು ಪತ್ತೆಯಾಗಿತ್ತು. ಭಾರಿ ಶಸ್ತ್ರಾಸ್ತ್ರ ಹೊತ್ತ ಹಲವು ಉಗ್ರರು ಭಟ್ಟಲ್ ಪ್ರದೇಶದ ಅರಣ್ಯದಿಂದ ಒಳನುಸಳಲು ಯತ್ನಿಸುತ್ತಿದ್ದರು. ಕೂಡಲೇ ಕಾರ್ಯಪೃವೃತ್ತರಾದ ಸೇನಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.

ಈ ವೇಳೆ ಉಗ್ರರು ಸೇನಾಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಉಗ್ರರ ದಾಳಿಗೆ ಸೇನಾಪಡೆ ಪ್ರತಿದಾಳಿ ನಡೆಸಿದ್ದರು. ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ ಹುತಾತ್ಮರಾಗಿದ್ದಾರೆ.

ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಿಶ್ವವಾರ್ ಜಿಲ್ಲೆಯ ಚಿತ್ರ, ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಕಳೆದ ಒಂದು ವರ್ಷದಿಂದ ಚೆನಾಬ್ ಕಣಿವೆ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಜೈಷ್ -ಇ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೈಫುಲ್ಲಾ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.

ಕಟ್ಟ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ, ಕಿಶ್ವಾರ್ನ ಛಾತ್ರುನಲ್ಲಿ ಪಾಕಿಸ್ತಾನದ ಇಬ್ಬರನ್ನು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿವೆ.

ಕಳೆದ ಬುಧವಾರದಿಂದ ಸೇನಾಪಡೆ ಈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಉಗ್ರರ ಚಲನವಲನಗಳು ಪತ್ತೆಯಾಗಿತ್ತು. ಈ ವೇಳೆ ಕಾರ್ಯಾಚರಣೆ ತೀವ್ರಗೊಂಡಾಗ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ಆರಂಭಿಸಿದ್ದಾರೆ. ಬಳಿಕ ಸ್ಥಳವನ್ನು ಸುತ್ತುವರೆದ ಸೇನಾಪಡೆ ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ತಿಂಗಳು ಜಮ್ಮು ಪ್ರದೇಶದ ಕಥುವಾ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಮತ್ತು ಇಬ್ಬರು ಉಗ್ರರು ಸಾವನ್ನಪ್ಪಿದ ನಂತರ ಅಯ್ಯೋರ್, ಕಿಶ್ವವಾರ್ ಮತ್ತು ಉಧಂಪುರದಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ ಎಂದು ತಿಳಿದುಬಂದಿದೆ.

ಸೇನಾಪಡೆ ಶೋಧ ಕಾರ್ಯಾಚರಣೆಗೆ ಪರ್ವತ ಪ್ರದೇಶ ಮತ್ತು ಹಿಮದಿಂದ ಆವೃತವಾದ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವಲನಗಳನ್ನು ಪತ್ತೆಹಚ್ಚಲು ಡೋನ್ ಗಳು, ಹೆಲಿಕಾಪ್ಟರ್ಗಳು ಮತ್ತು ಸ್ನಿಫರ್ ನಾಯಿಗಳನ್ನು ಬಳಸುತ್ತಿದ್ದಾರೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಉನ್ನತ ಪ್ಯಾರಾ ಕಮಾಂಡೋಗಳು ಸೇನಾಪಡೆಗೆ ಸಹಾಯ ಮಾಡುತ್ತಿದ್ದಾರೆ. ಜಮ್ಮುವಿನ ಉಧಂಪುರ ಜಿಲ್ಲೆಯ ಜೋಫರ್-ಮಾಟಾರ್ ಅರಣ್ಯ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಬೇಸಿಗೆಯಲ್ಲಿ ಗಡಿಯಾಚೆಗಿನ ಸಂಚಾರಕ್ಕೆ ಅನುವು ಮಾಡಿಕೊಡುವ ಹಿಮ ಕರಗುವಿಕೆಯಿಂದಾಗಿ ಭದೇರ್ವಾದ ಎತ್ತರದ ವಲಯಗಳಲ್ಲಿ ಭದ್ರತಾ ಪಡೆಗಳು ಕಣ್ಣಾವಲು ಹೆಚ್ಚಿಸಿವೆ. ಹೆಲಿಕಾಪ್ಟರ್ಗಳು ಮತ್ತು ಡೋನ್ಗಳ ಬೆಂಬಲದೊಂದಿಗೆ, ಪಡೆಗಳು ಕಿತ್ತವಾರ್, ಉಧಂಪುರ ಮತ್ತು ಕಥುವಾವನ್ನು ಸಂಪರ್ಕಿಸುವ ಪ್ರದೇಶಗಳ ಮೇಲೆ ನಿಗಾ ಇಡುತ್ತಿವೆ. ಕಥುವಾ, ಉಧಂಪುರ ಮತ್ತು ಕಿಶ್ವಾರ್ ಪರ್ವತ ಪ್ರದೇಶಗಳಲ್ಲಿ ಕಳೆದ 19 ದಿನಗಳಲ್ಲಿ ಐದು ಎನ್ಕೌಂಟರ್‍ಗಳು ನಡೆದಿವೆ.

RELATED ARTICLES

Latest News