Saturday, April 19, 2025
Homeರಾಜ್ಯಮುಂದುವರೆಯಲಿರುವ ಬೇಸಿಗೆ ಮಳೆ

ಮುಂದುವರೆಯಲಿರುವ ಬೇಸಿಗೆ ಮಳೆ

ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಚದುರಿದಂತೆ ಮುಂಗಾರುಪೂರ್ವ ಮಳೆಯಾಗುತ್ತಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ. Summer rains to continue

ಬೆಂಗಳೂರು, ಏ.15- ಕಳೆದ ಮೂರು ವಾರಗಳಿಂದ ರಾಜ್ಯದಲ್ಲಿ ಚದುರಿದಂತೆ ಮುಂಗಾರುಪೂರ್ವ ಮಳೆಯಾಗುತ್ತಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ.

ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಮುನ್ಸೂಚನೆಗಳಿವೆ. ನಿನ್ನೆ ರಾಜಧಾನಿ ಬೆಂಗಳೂರು, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಕೆಲವೆಡೆ ಸಾಧಾರಣದಿಂದ ಹಗುರ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಬಿರುಗಾಳಿ, ಮಿಂಚು ಗುಡುಗಿನ ಆರ್ಭಟದೊಂದಿಗೆ ಮಳೆಯಾಗಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಹಣ ಹವೆ ಮುಂದುವರೆಯಲಿದೆ. ಆದರೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳು ಸದ್ಯಕ್ಕಿಲ್ಲ.

ಬೇಸಿಗೆ ಮಳೆಯಾಗಿರುವುದರಿಂದ ಬೆಂಗಳೂರು ಸುತ್ತಮುತ್ತ ಭಾಗಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಮಾತ್ರ ಮಿಂಚು ಗುಡುಗು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಸೋಮವಾರವೂ ಬನಶಂಕರಿ, ಜೆಪಿನಗರ, ಮೆಜಿಸ್ಟಿಕ್ ಸೇರಿ ಹಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಬೀರ್ದ ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿ ಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶಿಗ್ಗಾಂವ್, ನಾಪೋಕ್ಷು, ತಿಪಟೂರು, ಬೆಂಗಳೂರಿನಲ್ಲಿ ಮಳೆಯಾಗಿದೆ.

RELATED ARTICLES

Latest News