ನವದೆಹಲಿ, ಏ. 17: ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರು ಮಾಡಿದ ಪ್ರಯತ್ನಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದು ಮೋದಿ ಎಕ್ಸ್ ನಲ್ಲಿ ಹೇಳಿದ್ದಾರೆ.
1927ರಲ್ಲಿ ಪೂರ್ವ ಉತ್ತರಪ್ರದೇಶದಲ್ಲಿ ಜನಿಸಿದ ಚಂದ್ರಶೇಖರ್ 1990ರ ನವೆಂಬರ್ ನಿಂದ 1991ರ ಜೂನ್ ವರೆಗೆ ಅಲ್ಪಾವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.