ನಾಗಮಂಗಲ,ಏ.17– ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕದಬಹಳ್ಳಿ ಗ್ರಾಮದ ಬಳಿ ಕಳೆದ ರಾತ್ರಿ ನಡೆದಿದೆ. ಬೆಂಗಳೂರಿನ ನಿವಾಸಿಗಳಾದ ನಾಗರಾಜು(45)ಹಾಗು ಶ್ವೇತಾ (38) ಮೃತ ದಂಪತಿ ಗ್ರಾಮದಲ್ಲಿ ಜಾತ್ರೆ ಇದ್ದ ಕಾರಣ ಬೆಂಗಳೂರಿನಿಂದ ಕೆ.ಆರ್.ಪೇಟೆ ತಾಲೂಕಿನ ಗದ್ದೇಹೊಸೂರು ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕದಬಹಳ್ಳಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.
ರಸ್ತೆಗೆ ಉರುಳಿಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ ಕೊನೆಯುಸಿರೆಳೆದಿದ್ದಾರೆ. ಕೆ.ಆರ್.ಪೇಟೆ ತಾಲೂಕಿನ ಗದ್ದೇಹೊಸೂರು ಗ್ರಾಮದ ಶ್ವೇತಾರನ್ನು (38) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿದರಕ, ಗ್ರಾಮದ ನಾಗರಾಜು(45) ಮದುವೆ ಮಾಡಿಕೊಡಲಾಗಿತ್ತು.
ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆಸಿದ ವಾಹನ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ ಘಟನೆ ಸಂಬಂಧ ನಾಗಮಂಗಲ ತಾಲೂಕಿನ ಬಿಂಡಿಗನ ನವಿಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರಂತಕ್ಕೆ ಗ್ರಾಮದ ಜನರು ಕಂಬನಿ ಮಿಡಿದಿದ್ದಾರೆ.ಪೊಲೀಸರು ವಾಹನ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.