ಬಳ್ಳಾರಿ,ಏ.17-ಬಿಸಿಲಿನ ತಾಪಕ್ಕೆ ತುಂಗಭದ್ರಾ ಜಲಾಶಯ ಬಳಿಯ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಷ್ಟ್ರೀಯ ಹೆದ್ದಾರಿ- 50ರ ಪಕ್ಕದಲ್ಲಿರುವ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕೆನ್ನಾಲಿಗೆಗೆ ಗಿಡ ಮರಗಳು ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾಸಿಗರೇಟ್ ಸೇದಿ ಬಿಸಾಡಿರಬಹುದೆಂದು ಶಂಕಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ಸ್ಥಳೀಯ ಗ್ರಾಮಸ್ಥರಿಗೆ ಕಿಡಿಗೇಡಿಗಳ ಬಗ್ಗೆ ಎಚ್ಚರವಹಿಸುವಂತೆ ತಿಳಿಸಿದ್ದಾರೆ.