ಕಾರವಾರ,ಏ.18-ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆ ಒಂದರಲ್ಲಿ ಪತ್ತೆಯಾದ ಕಂತೆ ಕಂತೆ ನಕಲಿ ನೋಟುಗಳ ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಲಾಗಿದೆ.
ಗೋವಾ, ಹೈದರಾಬಾದ್ ಸೇರಿ ಹಲವಡೆ ವಾಸ್ತವ್ಯ ಬದಲಿದಿ ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್ ಎಂಬಾತನನು ಬಂಧಿಸಿ ಉತ್ತರ ಕನ್ನಡಕ್ಕೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
10 ದಿನಗಳ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರಂಭದಲ್ಲಿ, ನಕಲಿ ನೋಟಿನ ಕಂತೆಗಳ ಮೇಲೆ, ಮೂವಿ ಪರ್ಪಸ್ ಓನ್ನಿ ಎಂದು ಬರೆದಿದ್ದರಿಂದ ಪೊಲೀಸರು ಸುಮ್ಮನಾಗಿದ್ದರು. ಆದರೆ ಆರೋಪಿ ಹೈದರಾಬಾದ್‌ನಲ್ಲಿದ್ದೇನೆ, ಗೋವಾದಲ್ಲಿದ್ದೇನೆ ಎಂದು ಯಾಮಾರಿಸಿದ್ದರಿಂದ ಅನುಮಾನ ಹೆಚ್ಚಾಗಿತ್ತು.ನಂತರ ಆರೋಪಿಯ ಮೊಬೈಲ್ ಟವರ್ ಲೊಕೇಶನ್ ಹಾಗೂ ತಾಂತ್ರಿಕ ಸಹಾಯದ ಮೂಲಕ ಆತನನ್ನು ಪೊಲೀಸರು ಯಶಸ್ವಿಯಾಗಿದ್ದಾರೆ.
14 ಕೋಟಿ ನಕಲಿ ನೋಟು:
ಪೊಲೀಸರೇ ಶಾಕ್: ಆರೋಪಿಯನ್ನು ಸದ್ಯ ದಾಂಡೇಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿಗೆ ಸಮ್ಮತಿ ಸೂಚಿಸಿದೆ.
ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯ ವಿಚಾರಣೆ ತೀವ್ರಗೊಳಿಸಲಾಗಿದ್ದು, ನಕಲಿ ನೋಟಿನ ಹಿಂದಿನ ಅಸಲಿ ಕಾರಣ ತಿಳಿಯಬೇಕಿದೆ. ಗಾಂಧಿನಗರದ ನೂರಜಾನ್ ಜುಂಜುವಾಡ್ಕರ ಎಂಬವವರ ಮನೆಯಲ್ಲಿ ಅರ್ಷದ್ ಬಾಡಿಗೆಗೆ ವಾಸವಾಗಿದ್ದ.
ಕಳೆದ ಒಂದು ತಿಂಗಳಿನಿಂದ ಈತ ಆ ಮನೆಯಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಮತ್ತು ಆ ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸರು ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆಯೇ, 500 ರೂ. ಮುಖ ಬೆಲೆಯ ಕಂತೆ ಕಂತೆ ನೋಟುಗಳು ಕಾಣಿಸಿದ್ದವು.
ಸುಮಾರು 14 ಕೋಟಿ ರೂಪಾಯಿಗೂ ಹೆಚ್ಚು ಮುಖಬೆಲೆಯ ನಕಲಿ ನೋಟುಗಳು ಕಾಣಿಸಿದ್ದವು. ಅವುಗಳ ಬಂಡಲ್ ಮೇಲೆ ಮೂವಿ ಪರ್ಪಸ್ ಓನ್ನಿ ಎಂದು ಬರೆದಿತ್ತು. ನಂತರ ಅರ್ಷದ್ ಕರೆ ಮಾಡಿ ಪೊಲೀಸರು ವಿಚಾರಿಸಿದ್ದರು. ಆಗ ಆತ, ಗೋವಾದಲ್ಲಿ ಇದ್ದು ಬರುವುದಾಗಿ ಮಾಹಿತಿ ನೀಡಿದ್ದ. ಆದರೆ, ಆತ ಯಾಮಾರಿಸುತ್ತಿದ್ದಾನೆ ಎಂಬುದು ಅರಿವಾದ ಕೂಡಲೇ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿದ್ದಾರೆ. ಆಗ ಆರೋಪಿ ಲಖನೌನಲ್ಲಿರುವುದು ಗೊತ್ತಾಗಿತ್ತು.