ನವದೆಹಲಿ, ಏ. 19- ಕೇಂದ್ರ ಸರ್ಕಾರದ ನಿರ್ಧಾರಗಳಿಗೆ ಸಡ್ಡು ಹೊಡೆಯಲು ಮುಂದಾಗಿರುವ ತಮಿಳುನಾಡು ಸರ್ಕಾರದ ವಿರುದ್ಧ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಮಾಹಿತಿ ನೀಡಿದ್ದಾರೆ.
ಧನ್ಕರ್ ಕಚೇರಿ ಸಭೆಯ ಛಾಯಾಚಿತ್ರಗಳನ್ನು ಎಕ್‌್ಸನಲ್ಲಿ ಪೋಸ್ಟ್ ನಲ್ಲಿ ಹಂಚಿಕೊಳ್ಳಲಾಗಿದೆ. ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲ ಆರ್.ಎನ್.ರವಿ ಅವರು ಇಂದು ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಉಪರಾಷ್ಟ್ರಪತಿಗಳ ನಿವಾಸದಲ್ಲಿ ಭೇಟಿಯಾದರು ಎಂದು ಅದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.
ಇದರ ಜೊತೆಗೆ ಪ್ರತ್ಯೇಕವಾಗಿ, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರು ಉಪರಾಷ್ಟ್ರಪತಿಯನ್ನು ಭೇಟಿಯಾಗಿದ್ದಾರೆ.ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರು ಇಂದು ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಉಪರಾಷ್ಟ್ರಪತಿ ನಿವಾಸದಲ್ಲಿ ಭೇಟಿಯಾದರು ಎಂದು ಉಪರಾಷ್ಟ್ರಪತಿ ಕಚೇರಿ ತಿಳಿಸಿದೆ.