Tuesday, April 21, 2026
Homeರಾಜ್ಯಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಫೆ.4- ಪ್ರಸಕ್ತ ಸಾಲಿನ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ- 1 ಈಗಾಗಲೇ ನಿಗದಿಪಡಿಸಿರುವ ದಿನಾಂಕದಂದೇ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ಈಗಾಗಲೇ ಸ್ಪಷ್ಟಪಡಿಸಿರುವಂತೆ ಈ ಬಾರಿಯ ಎಸ್‌‍ಎಸ್‌‍ಎಲ್‌‍ಸಿ ಪರೀಕ್ಷೆ-1 ಮುಂಬರುವ 2026 ಮಾರ್ಚ್‌ 18 ರಿಂದ ಏಪ್ರಿಲ್‌ 2 ರವರೆಗೆ ನಡೆಯಲಿದ್ದು, ನಿಗದಿಪಡಿಸಿರುವ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡಳಿ ನಿಗದಿಪಡಿಸಿರುವಂತೆ 2025 – 26ನೇ ಸಾಲಿನ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ – 1 ಅಂತಿಮ ವೇಳಾಪಟ್ಟಿಯು ಕಳೆದ ನವೆಂಬರ್‌ ತಿಂಗಳಿನ 4 ರಂದು ಜಾಲತಾಣ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇಲ್ಲ ಎಂದು ಮಂಡಳಿ ತಿಳಿಸಿದೆ.

RELATED ARTICLES

Latest News