ರೋಪ್ಲಾಸ್,ವಿ.22– ಬೈಕ್ನಲ್ಲಿ ಮದುವೆಗೆ ಹೋಗುತ್ತಿದ್ದ ಮೂವರು ಯುವಕರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಬಿಹಾರದ ರೋಪ್ಲಾಸ್ ಜಿಲ್ಲೆಯಲ್ಲಿ ಸಂಭವಿಸಿದೆ.
ತಡರಾತ್ರಿ ರಾಮನಗರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುಜಾನು ಗ್ರಾಮದ ನಿವಾಸಿ ಮಂತೋಷ್ ಕುಮಾರ್ (20), ಭೂರ್ ಕುಮಾರ್ (18) ಮತ್ತು ಸಜ್ಜನ್ ಕುಮಾರ್ (22) ಎಂದು ಗುರುತಿಸಲಾಗಿದೆ.
ಅವರು ಹೋಗುತ್ತಿದ್ದ ಬೈಕ್ಗೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರಿನ ಚಾಲಕ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನೋಖಾದ ಠಾಣೆಯ ದಿನೇಶ್ ಮಲಾಕರ್ ತಿಳಿಸಿದರು.
ಮುಂಜಾನೆ ಪೊಲೀಸರು ಕಾರನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ ಮತ್ತು ಅದು ಸರ್ಕಾರಿ ಅಧಿಕಾರಿಯೊಬ್ಬರಿಗೆ ಸೇರಿದೆ ಎಂದು ಶಂಕಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು