ತರೀಕೆರೆ,ಏ.22- ತಾಲ್ಲೂಕಿನ ಅಮೃತಾಪುರ ಗ್ರಾಮದ ಲಂಬಾಣಿ ಹಟ್ಟಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ-ನಡೆಸಿ ಘಟನೆ ನಡೆದ 2 ಗಂಟೆಯೊಳಗಾಗಿ ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
ಮೊನ್ನೆ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಸಂಘದ ಚೀಟಿಯಿಂದ ಹೊರಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಕಾಲೋನಿಯ ರುದ್ರೇಶ್ ನಾಯ್ಕ ಮತ್ತು ಸಂಜುನಾಯ್ಕ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಕೋಪಕ್ಕೆ ತಿರುಗಿದಾಗ ಸಂಜುನಾಯ್ಕನ ( 26 ) ತಲೆಯ ಬಲಭಾಗಕ್ಕೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ-ರುದೇಶ್‌ನಾಯ್ಕ ಪರಾರಿಯಾಗಿದ್ದನು.
ಈ ಬಗ್ಗೆ ಯಶವಂತ್ ನಾಯ್ಕ ಎಂಬುವವರು ತರೀಕೆರೆ ಪೊಲಿಸ್ ಠಾಣೆಗೆ ದೂರು ನೀಡಿದ್ದರ ಮೇರೆಗೆ ಪ್ರಕರಣ ದಾಖಸಿಕೊಂಡು ತನಿಖೆ ಕೈಗೊಂಡಿದ್ದರು. ಆರೋಪಿ ಪತ್ತೆಗಾಗಿ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರಾದ ಡಾ. ವಿಕ್ರಂ ಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್ ಹಾಗೂ ತರೀಕೆರೆ-ಡಿವೈಎಸ್‌ಪಿ ಹಾಲಮೂರ್ತಿ ರಾವ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಗಳ ಎರಡು ತಂಡಗಳನ್ನು ರಚಿಸಿದ್ದು, ಅದರಂತೆ ಪ್ರಕರಣ ದಾಖಲಾದ ಕೇವಲ 2 ಗಂಟೆಯೊಳಗೆ ಪರಾರಿಯಾಗಿದ್ದ ಆರೋಪಿ ರುದೇಶ್ ನಾಯ್ಕನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ.