Tuesday, April 22, 2025
Homeರಾಜ್ಯಕೇಂದ್ರ-ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮನ್ ಇಂಡಿಯಾ ಮೂಮೆಂಟ್ ಪ್ರತಿಭಟನೆ

ಕೇಂದ್ರ-ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮನ್ ಇಂಡಿಯಾ ಮೂಮೆಂಟ್ ಪ್ರತಿಭಟನೆ

Woman India Movement protests against price hikes by central and state governments

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯದ ಜನತೆಯ ಮೇಲೆ ಮಿತಿಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿರುವುದರ ವಿರುದ್ಧ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡುವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಏಪ್ರಿಲ್ 18 ರಿಂದ 28 ರ ವರೆಗೆ ಪ್ರತಿಭಟನಾ ಅಭಿಯಾನ ಹಮ್ಮಿಕೊಳ್ಳಲು ವಿಮೆನ್ ಇಂಡಿಯಾ ಮೂಮೆಂಟ್ ತಿಳಿಸಿತು.

ಪತ್ರಿಕಾಗೋಷ್ಠಿಯನ್ನ ಉದ್ದೇಶಕ್ಕೆ ಮಾತನಾಡಿದ ಅಧ್ಯಕ್ಷ ಸುಮಿಯ ಬೇಗಮ್, ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿದ್ದು ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರ ಜೊತೆಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋ ರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ಖಾಸಗಿ ವಾಹನಗಳ ಕಡೆ ಮುಖ ಮಾಡುವಂತಾಗಿದೆ.

ಜಾಗತಿಕವಾಗಿ ತೈಲ ಬೆಲೆಗಳು ಇಳಿಯುತ್ತಿದ್ದರೂ ಸಹ ತೈಲಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಹಗಲು ದರೋಡೆಗೆ ಇಳಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಕಚ್ಚಾತೈಲಗಳ ಬೆಲೆ ಕುಸಿತದ ಲಾಭ ಜನ ಸಾಮಾನ್ಯರಿಗೆ ದೊರಕದಂತೆ ಮಾಡಲಾಗಿದೆ. ಬಡ, ಮಧ್ಯಮ ವರ್ಗಗಳಿಗೆ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ, ಏರಿರುವ ಸರ್ಕಾರಗಳು ಇದೀಗ ಜನತೆಯ ದೈನಂದಿನ ಜೀವನವನ್ನು ತ್ರಾಸದಾಯಕವನ್ನಾಗಿಸಿವೆ ಎಂದು ದೂರಿದರು

ಒಂದು ಕಡೆ ಅಚ್ಛೇದಿನ್ ಹೆಸರಲ್ಲಿ ಕೇಂದ್ರ ಸರ್ಕಾರ, ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರ್ಕಾರ ಎನ್ನುವ ರಾಜ್ಯ ಸರ್ಕಾರ ಎರಡೂ ಸೇರಿಕೊಂಡು ಬೆಲೆ ಏರಿಕೆಯಿಂದ ಜನರನ್ನೇ ಲೂಟಿ ಮಾಡುತ್ತಿವೆ ಇದು ಸಾಲದೆಂಬಂತೆ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿ ಜನರ ಗಮನ ಆತ್ಮಕಡೆ ಸೆಳೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ನಿರಂತರವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿವೆ.

ವಸಾಹತುಶಾಹಿ ಬ್ರಿಟಿಷರ ಜನವಿರೋಧಿ ನೀತಿಗಳಂತೆ ಇಂದು ಕೂಡ ಆಗ ಸೇವಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಈಡುಮಾಡಲಾಗುತ್ತಿದೆ. ಅತ್ಯವಶ್ಯಕ ವಸ್ತುಗಳ ಖರೀದಿಗೂ ಭಾರಿ ತೆರಿಗೆ ಪಾವತಿಸಬೇಕಾದಂತ ದುಸ್ಥಿತಿ ಉಂಟಾಗಿದೆ ಇದರ ವಿರುದ್ಧ ಹೋರಾಟ ಮಾಡುವುದಾಗಿ ಎಚ್ಚರಿಸಿದರು

RELATED ARTICLES

Latest News