ಬೆಂಗಳೂರು, ಏ.23– ಜಮ್ಮು-ಕಾಶ್ಮೀರದ ಪಹಲ್‌ಗಾಮ್ ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರವಾಗಿ ಖಂಡಿಸಿದ್ದಾರೆ.
ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಮಂದಿ ಬಲಿಯಾಗಿರುವುದು ಅತೀವ ನೋವು ತಂದಿದೆ. ಪಹಲ್‌ಗಾಮ್ ಉಗ್ರರ ದಾಳಿಯ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರ ದಲ್ಲಿ 370 ವಿಧಿ ರದ್ದುಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ. ಕೃತ್ಯದಲ್ಲಿ ಬಲಿಯಾದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಅವರು ಹೇಳಿದರು.
- ಭ್ರಷ್ಟ ಅಧಿಕಾರಿಗಳಿಂದ ಭೂಗಳ್ಳರ ಪಾಲಾಗಿರುವ 200 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಆಗ್ರಹ
- A ಖಾತಾ ಸೋಗಿನಲ್ಲಿ 15,000 ಕೋಟಿ ರೂ. ಸುಲಿಗೆ : ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ
- ಆರ್ಎಸ್ಎಸ್ ಶತಮಾನೋತ್ಸವದಲ್ಲಿ ಪಾಲ್ಗೊಂಡಿದ್ದ ಆರ್ಡಿಪಿಆರ್ ನೌಕರರ ಅಮಾನತ್ತು!
- ಬೆಂಗಳೂರು : 14 ಲಕ್ಷ ಮೌಲ್ಯದ ನಕಲಿ ಸಿಗರೇಟ್ಗಳ ಜಪ್ತಿ
- ಬಿಜೆಪಿ ಭಿನ್ನರ ಮೀಟಿಂಗ್, ಗರಿಗೆದರಿದ ರಾಜಕೀಯ ಚಟುವಟಿಕೆ