ನವದೆಹಲಿ,ಏ.24-ಪಹಲ್ಲಾಮ್ ಭಯೋತ್ಪಾದಕ ದಾಳಿಯ ಕುರಿತು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಸಂಪೂರ್ಣ ಮಾಹಿತಿ ನೀಡಿ ನಂತರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈಗಾಗಲೆ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆಯ ಕುರಿತಾದ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ಪಾಕಿಸ್ತಾನದ ವಿರುದ್ದ ಹಲವಾರು ದಿಟ್ಟ ರಾಜತಂತ್ರಿಕ ಕ್ರಮಗಳನ್ನು ಕೈಗೊಂಡಿದೆ.
ಇಂದಿನ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಸಭೆಯಲ್ಲಿ ಮಾತನಾಡಬಹುದು ಎಂದು ಮೂಲಗಳು ತಿಳಿಸಿವೆ.ಸಿಂಗ್ ಮತ್ತು ಶಾ ವಿವಿಧ ಪಕ್ಷ ನಾಯಕರ ಸಂಪರ್ಕಿಸುವ ಮೂಲಕ ಸರ್ವಪಕ್ಷ ಸಭೆ ಕರೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದು ಬಿಕ್ಕಟ್ಟಿನ ಕ್ಷಣಗಳಲ್ಲಿ ರಾಷ್ಟ್ರೀಯ ಏಕತೆಯನ್ನು ಪ್ರಸ್ತುತ ಪಡಿಸುವುದು, ವಿರೋಧ ಪಕ್ಷದ ನಾಯಕರು ತಮ್ಮ ಅಭಿಪ್ರಾಯಗಳನ್ನು ಸರ್ಕಾರಕ್ಕೆ ತಿಳಿಸಲು ಮತ್ತು ಅಧಿಕೃತ ನಿಲುವು ಕೈಗೊಳ್ಳಲು ಸಭೆ ಮಹತ್ವ ಪಡೆದಿದೆ. ಈ ನಡುವೆ ಪ್ರಧಾನಿ ಮೋದಿ ಅವರೇ ಸಭೆ ಅಧ್ಯಕ್ಷತೆ ವಹಿಸಬೇಕೆಂದು ಪ್ರಮುಖ ವಿಪಕ್ಷ ಕಾಂಗ್ರೇಸ್ ಒತ್ತಾಯಿಸಿದೆ.