ಬೆಂಗಳೂರು, ಏ.24- ನಗರದಲ್ಲಿ ಅನಧಿಕೃತ ಜಾಹಿರಾತುಗಳ ತೆರವಿಗಾಗಿ ಪರಿಷ್ಕೃತ ಕಾರ್ಯಾಚರಣಾ ವಿಧಾನ ಆದೇಶವನ್ನು ಜಾರಿಗೊಳಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳ ಅಳವಡಿಕೆ ಹೆಚ್ಚಾಗುತ್ತಿದ್ದು, ಬಿಬಿಎಂಪಿ ಜಾಹೀರಾತು ನಿಯಂತ್ರಣ ತಂಡ ರಚಿಸಲು ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.ಜಾಹಿರಾತು ಪ್ರದರ್ಶನ ಕುರಿತು ದೂರುಗಳನ್ನು ಸ್ವೀಕರಿಸಲು ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲು ಸೂಚಿಸಲಾಗಿದೆ ಎಂದರು.
ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 158ರಂತೆ ಪಾಲಿಕೆಯ ವ್ಯಾಪ್ತಿಯಲ್ಲಿನ ಯಾವುದೇ ಕಟ್ಟಡ, ಗೋಡೆ ಅಥವಾ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ಆಯುಕ್ತರ ಲಿಖಿತ ಅನುಮತಿಯಿಲ್ಲದೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.
ಮುಂದುವರೆದು, ಬಿಬಿಎಂಪಿ ಕಾಯ್ದೆ 2020 ರ ಸೆಕ್ಷನ್ 158ರಂತೆ ಮುಖ್ಯ ಆಯುಕ್ತರ ಲಿಖಿತ ಅನುಮತಿ ಸಲ್ಲಿಸದೇ ಹೊರತು ಯಾವುದೇ ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಮುದ್ರಣವನ್ನು ಮುದ್ರಿಸದಂತೆ ವಲಯ ಆಯುಕ್ತರುಗಳು ಈಗಾಗಲೇ ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 307ರನ್ವಯ ವ್ಯಾಪಾರ ಪರವಾನಗಿಯ ನಿಯಮಗಳು ಮತ್ತು ಷರತ್ತುಗಳನ್ನು ಸೂಚಿಸಿ ಆದೇಶವನ್ನು ಹೊರಡಿಸಿರುತ್ತಾರೆ.
ಬೆಂಗಳೂರು ನಗರದಲ್ಲಿ ಅನಧಿಕೃತ ಫ್ಲೇಕ್ಸ್, ಬ್ಯಾನರ್, ಕಟೌಟ್ ಹಾಗೂ ಇನ್ನೀತರೆ ಜಾಹೀರಾತು ಪ್ರದರ್ಶನಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಈ ಹಿಂದೆ ಉಲ್ಲೇಖ(1)ರಲ್ಲಿ ಹೊರಡಿಸಲಾಗಿದ್ದ ಪ್ರಮಾಣಿತ ಕಾರ್ಯಚರಣಾ ವಿಧಾನವನ್ನು ಹಿಂಪಡೆದು ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಹೊರಡಿಸಲಾಗಿದೆ.
ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ಫ್ಲೇಕ್ಸ್, ಬ್ಯಾನರ್, ಕಟೌಟ್ ಹಾಗೂ ಇನ್ನೀತರೆ ಜಾಹೀರಾತು ಪ್ರದರ್ಶನಗಳನ್ನು ತೆರುವಗೊಳಿಸಲು, ಮಾರ್ಷಲ್‌್ಸಮತ್ತು ಪ್ರಹರಿಯವರ ಸಹಯೋಗದೊಂದಿಗೆ ಕಿರಿಯ ಅಭಿಯಂತರರು, ಸಹಾಯಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳ ತಂಡಗಳನ್ನು(ಬಿಬಿಎಂಪಿ ಜಾಹೀರಾತು ನಿಯಂತ್ರಣ ತಂಡ) ವಲಯ ಆಯುಕ್ತರು ರಚಿಸತಕ್ಕದ್ದು.
ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಕಟೌಟ್ ಹಾಗೂ ಇನ್ನಿತರೆ ಜಾಹೀರಾತುಗಳನ್ನು ತೆಗೆದುಹಾಕುವ ಹಾಗೂ ಅನಧಿಕೃತವಾಗಿ ಅಳವಡಿಸಲಾಗಿರುವವರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ(ಎಫ್‌ಐಆರ್) ದಾಖಲಿಸುವ ಹಾಗೂ ದಂಡ ವಿಧಿಸುವ ಕಾರ್ಯದ ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ಸಂಬಂಧಪಟ್ಟ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ರವರಿಗೆ ನೀಡಲಾಗಿದೆ.
- ಡಾ.ರಾಜ್ ಹುಟ್ಟುಹಬ್ಬದಂದು ಶಿವಣ್ಣನ ಹೊಸ ಸಿನಿಮಾ ಘೋಷಣೆ
- ಪೆಹಲ್ಗಾಮ್ ಉಗ್ರರ ದಾಳಿಯನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ ‘ಪಾಪಿ’ಗಳು
- ಭಾರತದೆಲ್ಲೆಡೆ ಪಾಪಿಸ್ತಾನದ ವಿರುದ್ಧ ಪ್ರತಿಕಾರದ ಕೂಗು
- ಮೊದಲ ಪ್ರವಾಸವೇ ಅಂತಿಮಯಾತ್ರೆಯಾದ ಉದ್ಯಮಿಯ ದುರಂತ ಕಥೆ
- ಮುಗಿಲು ಮುಟ್ಟಿದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳ ಆಕ್ರಂದನ, ಪ್ರತೀಕಾರಕ್ಕೆ ಕೂಗು