ಬೆಂಗಳೂರು,ಏ.25- ಬಹುಕೋಟಿ ಮೌಲ್ಯದ ಚಿನ್ನ ವಂಚನೆ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ) ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.
ಗುರುವಾರದಿಂದಲೇ ಬೆಂಗಳೂರಿನ ಡಾಲರ್‌ರಸ ಕಾಲೋನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದಲ್ಲಿ ದಾಳಿ ನಡೆಸಿರುವ ಇ.ಡಿ ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಕೂಡ ಪರಿಶೀಲನೆ ಮುಂದುವರೆದಿದ್ದು, ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಇ.ಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
ಗುರುವಾರಷ್ಟೇ ಈ ಪ್ರಕರಣದ ಕಿಂಗ್‌ಪಿನ್ ಎಂದೇ ಹೇಳಲಾಗುತ್ತಿರುವ ವಂಚಕಿ ಐಶ್ವರ್ಯ ಗೌಡ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದು ಬಂಧಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ತಮ ವಶಕ್ಕೆ ಪಡೆದಿದ್ದಾರೆ.
ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯ ಗೌಡ ಜೊತೆ ವಿನಯ್ ಕುಲಕರ್ಣಿ ವ್ಯವಹಾರ ನಡೆಸಿರುವುದು ದಾಖಲೆಗಳಲ್ಲಿ ಕಂಡುಬಂದಿದೆ. ಅವರ ನಿವಾಸದಲ್ಲಿ ಸಿಕ್ಕಿರುವ ದಾಖಲೆಗಳಲ್ಲಿ ಕೋಟ್ಯಂತರ ರೂ. ಬೇನಾಮಿ ವ್ಯಾಪಾರ ವಹಿವಾಟು ನಡೆಸಿರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಯವರನ್ನೂ ಬಂಧಿಸಲು ಇ.ಡಿ ಅಧಿಕಾರಿಗಳು ಸಜ್ಜಾಗಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ಅವರ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಮತ್ತು ಬೆಂಗಳೂರಿನ ನಿವಾಸದ ಮೇಲೆ ಇಡಿ ದಾಳಿ ನಡೆಸಿತ್ತು.
ಐಶ್ವರ್ಯಗೌಡ ಅವರು ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಹೇಳಿಕೊಂಡು ಚಿನ್ನದ ವ್ಯಾಪಾರಿಗಳು, ವೈದ್ಯರು, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿದಂತೆ ಹಲವಾರು ಮಂದಿಗೆ ಬಹುಕೋಟಿ ವಂಚನೆ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಾಲ್ಕು ಪ್ರಕರಣಗಳು ದಾಖಲಾಗಿವೆ.
ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳಾದ ಐಶ್ವರ್ಯಗೌಡ ಮತ್ತು ಆಕೆಯ ಪತಿಗೆ ಸೇರಿದ್ದ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಒಂದೊಂದಾಗಿ ಜಪ್ತಿ ಮಾಡುವ ಸಂದರ್ಭದಲ್ಲಿ ಒಂದು ಕಾರು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ವಿನಯ್ ಕುಲಕರ್ಣಿ ಬಳಿ ಇರುವುದು ಪತ್ತೆಯಾಗಿತ್ತು.
ಐಶ್ವರ್ಯ ಗೌಡ ಆರಂಭದಿಂದಲೂ ತಮಗೆ ಗಣ್ಯರೊಂದಿಗೆ ಸಂಪರ್ಕವಿದೆ. ಡಿ.ಕೆ.ಸಹೋದರರ ತಂಗಿ ನಾನು ಎಂದು ಹೇಳಿಕೊಂಡು ಹಲವಾರು ಮಂದಿಗೆ ಧಮ್ಕಿ ಹಾಕಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡದಂತೆ ಬೆದರಿಸಿರುವ ಆಡಿಯೋಗಳು ಸಾಕಷ್ಟು ವೈರಲ್ ಆಗಿದ್ದವು.
ಈ ಮೊದಲು ಐಶ್ವರ್ಯಗೌಡ ಹಲವಾರು ಮಂದಿ ಶಾಸಕರನ್ನು ತಮ ಊರಿಗೆ ಕರೆದುಕೊಂಡು ಹೋಗಿರುವುದು ಜಾತ್ರೆ, ಹಬ್ಬ ಹರಿದಿನಗಳಲ್ಲಿ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಾಮಾನ್ಯವಾಗಿದೆ. ವಿನಯ್ ಕುಲಕರ್ಣಿ ಕೂಡ ಒಮೆ ಐಶ್ವರ್ಯಗೌಡ ಅವರ ಊರಿಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.
ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂ. ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು.ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು ಇ.ಡಿಗೆ ಮಾಹಿತಿ ನೀಡಿದ್ದರು.
ಐಶ್ವರ್ಯ ಗೌಡ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ವಾರಾಹಿ ವರ್ಲ್‌್ಡ ಆಫ್ ಗೋಲ್‌್ಡ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್‌ನಲ್ಲೇ ಡಿ.ಕೆ.ಸುರೇಶ್ ದೂರು ನೀಡಿದ್ದರು.
ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಅವರನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದರು.
ಮಾಜಿ ಸಂಸದ ಡಿ ಕೆ ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಅವರು 8.41 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್‌್ಡ ಆಫ್ ಗೋಲ್‌್ಡ ಶಾಪ್ ಮಾಲೀಕರು ದೂರು ನೀಡಿದ್ದರು.ಈ ದೂರಿನನ್ವಯ ಐಶ್ವರ್ಯಾ ಗೌಡ ಮತ್ತು ಪತಿ ಹರೀಶ್‌ನನ್ನು ಬಂಧಿಸಲಾಗಿತ್ತು. ಆದರೆ ಕೆಲದಿನಗಳ ಹಿಂದಷ್ಟೇ ಹೈಕೋರ್ಟ್ ಇವರಿಬ್ಬರಿಗೆ ಮಧ್ಯಂತರ ಜಾಮೀನು ನೀಡಿತ್ತು.