ಕೋಲ್ಕತ್ತಾ,ಅ.30-ಮೆಚುಪಟ್ಟಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು,ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ 15 ಜನರು ಸಾವನ್ನಪ್ಪಿದ್ದಾರೆ ಮಧ್ಯ ಕೋಲ್ಕತ್ತಾದಲ್ಲಿರುವ 6 ಮಹಡಿಯ ಹೋಟಲ್‌ನ 42 ಕೊಠಡಿಗಳಲ್ಲಿ 88 ಅತಿಥಿಗಳಿದ್ದರು,ಕಳೆದ ರಾತ್ರಿ ಈ ಬೆಂಕಿ ಅವಘಡ ಸಂಭವಿಸಿದೆ.
ಸುಮಾರು 13 ಮಂದಿ ಗಾಯಗೊಂಡಿದ್ದಾರೆ ಅಧರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಡಿಮೆ ವೆಚ್ಚದ ರಿತುರಾಜ್ ಹೋಟೆಲ್‌ನಲ್ಲಿ ರಾತ್ರಿ7:30 ರ ಸುಮಾನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಅಲ್ಲಿದ್ದವರು ಚೀರಾಡುತ್ತಾ ಹೊರಗೆ ಓಡಿಬಂದಿದ್ದಾರೆ.
ಹತ್ತು ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದು ಸಿಬ್ಬಂದಿ ಇಂದು ಬೆಳಿಗ್ಗೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಮೃತರಲ್ಲಿ 11 ಪುರುಷರು ಸೇರಿದ್ದಾರೆ, ಅವರಲ್ಲಿ ಎಂಟು ಮಂದಿಯನ್ನುಗುರುತಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ನಮ ಫೋರೆನ್ಸಿಕ್ ತಂಡವು ಪರಿಶೀಲಿಸುತ್ತದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಅಗ್ನಿ ಅವಘಡದಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ ಮತ್ತು ಗಾಯಾಳುಗಳಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದರು, ರಾಜ್ಯ ರಾಜಧಾನಿಯಲ್ಲಿ ಅಗ್ನಿ ದುರಂತ ಸಂಭವಿಸುತ್ತಿರುವಾಗ ದಿಘಾದಲ್ಲಿ ಜಗನ್ನಾಥ ಧಾಮದ ಒಂದು ದಿನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಅಸೂಕ್ಷ್ಮತೆ ಎಂದು ಆರೋಪಿಸಿದರು.